ಪ್ಯಾರಿಸ್: ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಅವನಿ ಲೇಖರಾ 10 ಮೀ. ಏರ್ ರೈಫಲ್ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಸತತ ಎರಡು ಪ್ಯಾರಾಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಶುಕ್ರವಾರ ನಡೆದ ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಅವನಿ ಚಿನ್ನದ ಪದಕ ಪಡೆದರು. ಇದೇ ಸ್ಪರ್ಧೆಯಲ್ಲಿ
ಭಾರತದ ಮೋನಾ ಅಗರ್ವಾಲ್ ಕಂಚಿನ ಪದಕ ಗೆದ್ದರು. ಈ ಸ್ಪರ್ಧೆಯಲ್ಲಿ ಅವನಿ 249.7 ಅಂಕಗಳಿಸಿ ಮೊದಲ ಸ್ಥಾನ ಪಡೆದರು. ಮೋನಾ ಅಗರ್ವಾಲ್ 228.7 ಅಂಕಗಳಿಸಿ ಮೂರನೇ ಸ್ಥಾನ ಪಡೆದರು. ಪ್ಯಾರಿಸ್ನಲ್ಲಿ ಶುಕ್ರವಾರ ನಡೆದ 10 ಮೀಟರ್ ಏರ್ ಪಿಸ್ತೂಲ್ ಎಸ್ಎಚ್1 ಸ್ಪರ್ಧೆಯಲ್ಲಿ ಮನೀಷ್ ನರ್ವಾಲ್ ಬೆಳ್ಳಿ ಪದಕ ಪಡೆದರು.ಟೋಕಿಯೊ ಪ್ಯಾರಾಲಿಂಪಿಕ್ಸ್ ಮಿಶ್ರ 50 ಮೀಟರ್ ಪಿಸ್ತೂಲ್ನಲ್ಲಿ ಚಿನ್ನದ ಪದಕ ವಿಜೇತರಾಗಿದ್ದ ಅವರು, ಈ ಬಾರಿ ಬೆಳ್ಳಿ ಪದಕ ಪಡೆದರು.
ಅವನಿ ಲೆಖರಾ ಅವರು 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ನಂತರ ನರ್ವಾಲ್ ಅವರ ಬೆಳ್ಳಿಯು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತಕ್ಕೆ ನಾಲ್ಕನೇ ಪದಕವಾಗಿದೆ.