ಪ್ಯಾರಿಸ್: ಪ್ಯಾರಾಲಿಂಪಿಕ್ಸ್ನಲ್ಲಿ ಪುರುಷರ ಜಾವೆಲಿನ್ ಥ್ರೋ F46 ಈವೆಂಟ್ನಲ್ಲಿ ಭಾರತದ ಅಜೀತ್ ಸಿಂಗ್ ಮತ್ತು ಸುಂದರ್ ಸಿಂಗ್ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ.ಮಂಗಳವಾರ ಸ್ಟೇಡ್ ಡಿ ಫ್ರಾನ್ಸ್ ಸ್ಟೇಡಿಯಂ ನಲ್ಲಿ ಈ ಸ್ಪರ್ಧೆಯಲ್ಲಿ ಮೂವರು ಭಾರತೀಯರು
ಟಾಪ್-5 ಹಣಾಹಣಿಯಲ್ಲಿ ಕಾಣಿಸಿಕೊಂಡಿದ್ದಾರೆ.ಆದರೆ ಕ್ಯೂಬಾದ ಗಿಲ್ಲೆರ್ಮೊ ವರೋನಾ ಗೊನ್ಝಲ್ವೆಝ್ ಅವರು ವೈಯಕ್ತಿಕವಾಗಿ 66.14 ಮೀಟರ್ ದೂರ ಎಸೆದು ಚಿನ್ನದ ಪದಕ ಪಡೆದರು. ಅಜಿತ್ ಅವರು 65.62 ಮೀಟರ್ಗಳ ಅತ್ಯುತ್ತಮ ಎಸೆತದೊಂದಿಗೆ ಬೆಳ್ಳಿ ಪದಕವನ್ನು ಪಡೆದರು. ಇದು ಅವರ ವೈಯಕ್ತಿಕ ಅತ್ಯುತ್ತಮ ಸಾಧನೆಯಾಗಿದೆ. 2021 ರಲ್ಲಿ ಟೋಕಿಯೊ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಅಜೀತ್ 8 ನೇ ಸ್ಥಾನ ಪಡೆದಿದ್ದರು. ಈ ಬಾರಿ ಅತ್ಯುತ್ತಮ ಪ್ರದರ್ಶನದೊಂದಿಗೆ ದ್ವಿತೀಯ ಸ್ಥಾನ ಪಡೆದರು.