ಸುಬ್ರಹ್ಮಣ್ಯ: ವಲಯಾರಣ್ಯಾಧಿಕಾರಿ ಕಚೇರಿ,
ಎಸ್ಎಸ್ಪಿಯು ಕಾಲೇಜು ಸುಬ್ರಹ್ಮಣ್ಯ ಮತ್ತು ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವವು ಬುಧವಾರ ನೆರವೇರಿತು. ವಿದ್ಯಾರ್ಥಿಗಳು
ಕಾಲೇಜು ಆವರಣದಲ್ಲಿ ಹಣ್ಣಿನ ಸಸಿ ನೆಡುವ ಮೂಲಕ ಪರಿಸರ ದಿನ ಆಚರಿಸಿದರು.ಈ ಸಂದರ್ಭ ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್ , ವಲಯ ಅರಣ್ಯಾಧಿಕಾರಿ ರಾಘವೇಂದ್ರ ಎಚ್.ಪಿ, ರೋವರ್ಸ್ ಮತ್ತು ರೇಂಜರ್ಸ್ ನಾಯಕರಾದ ಸವಿತಾ ಕೈಲಾಸ್, ಪ್ರವೀಣ್ ಎರ್ಮಾಯಿಲ್ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.