ಸುಳ್ಯ:ನಾವು ಸೇವಿಸುವ ಆಹಾರ, ಕುಡಿಯುವ ನೀರು, ಉಸಿರಾಡುವ ಗಾಳಿ ಮಲಿನವಾಗುತ್ತಿದೆ ಹೀಗಾದಲ್ಲಿ ಆಕ್ಸಿಜನ್ನ್ನು ಬಾಟಲಿಯಲ್ಲಿ ತುಂಬಿಸಿಕೊಂಡು ಹೋಗುವ ದಿನ ದೂರವಿಲ್ಲ.ಮುಂದಿನ ತಲೆಮಾರಿಗೆ ಸ್ವಚ್ಚ ಪರಿಸರ ನಿರ್ಮಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕರಾದ ಡಾ.ನರೇಂದ್ರ ರೈ ದೇರ್ಲ ಹೇಳಿದರು.
ಅವರು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಇದರ
ವತಿಯಿಂದ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಪ್ರೌಢಶಾಲಾ ವಿಭಾಗ ಮತ್ತು ಇಕೋ ಕ್ಲಬ್ನ ಸಹಯೋಗದಲ್ಲಿ ನಡೆದ ಪರಿಸರ ಜಾಗೃತಿಯಾನ – ಪರಿಸರ ಗೀತೆ ಗಾಯನ, ಔಷಧ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ಕಸಾಪ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೆಪಿಎಸ್ ಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಕೆ.ಪಿ.ಎಸ್.ಪ್ರಾಂಶುಪಾಲರಾದ ಜನಾರ್ಧನ ಕೆ.ಯನ್., ಉಪಪ್ರಾಂಶುಪಾಲರಾದ ಉಮಾಕುಮಾರಿ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಾಯಿಲಪ್ಪ ಜಿ.ಗಾಯಕಿ ಸಂಧ್ಯಾ ಮಂಡೆಕೋಲು ಪರಿಸರ ಗೀತೆಗಳನ್ನು ಹಾಡಿದರು. ಕಸಾಪ ನಿರ್ದೇಶಕ ಶರೀಫ್ ಜಟ್ಟಿಪಳ್ಳ ಸ್ವಾಗತಿಸಿ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಕೋ ಕ್ಲಬ್ ಸಂಚಾಲಕಿ ಆಶಾ ಕುಮಾರಿ ವಂದಿಸಿದರು. ಕಸಾಪ ನಿರ್ದೇಶಕ ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು.





