ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ
ಹತ್ಯೆಗೀಡಾದ ನಾಲ್ವರ ಕುಟುಂಬಕ್ಕೆ ರಾಜ್ಯ ಸರಕಾರ
ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರದ ಚೆಕ್ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜೂ.19ರಂದು ವಿತರಿಸಿದರು. ಹತ್ಯೆಗೀಡಾದ ನಾಲ್ವರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ ಸರಕಾರ ಪರಿಹಾರ ಮಂಜೂರು
ಮಾಡಿತ್ತು. ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಳ್ಯ ಬೆಳ್ಳಾರೆ ಕಳಂಜದ ಮಸೂದ್ ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಾಟಿಪಳ್ಳದ ಅಬ್ದುಲ್ ಜಲೀಲ್, ದೀಪಕ್ ರಾವ್ ಅವರ ಕುಟುಂಬಕ್ಕೆ ಈ ಪರಿಹಾರ ಧನವನ್ನು ವಿತರಿಸಲಾಯಿತು. ಮಸೂದ್ ಕುಟುಂಬ
ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಇಂದು
ರೂ 25 ಲಕ್ಷ ಪರಿಹಾರದ ಚೆಕ್ ಅನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಝಮೀರ್ ಅಹಮ್ಮದ್, ಶಾಸಕರಾದ ಅಶೋಕ್ ರೈ, ತನ್ವಿರ್ ಸೇಠ್, ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್, ಮಾಜಿ ಶಾಸಕ ಐವನ್ ಡಿ ‘ಸೋಜಾ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಶಾಹುಲ್ ಹಮೀದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕೆಪಿಸಿಸಿ ಸಂಯೋಜಕ ಜಿ. ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಾಪ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ, ಸತೀಶ್ ಕೂಜುಗೋಡು, ಮಸೂದ್ ತಾಯಿ ಸಾರಮ್ಮ. ಪತಿ ಅಬ್ದುಲ್ ಖಾದರ್,ಸಹೋದರ ಸಂಬಂಧಿ ಹೈದರ್ ಕಳಂಜ ಮೊದಲಾದವರು ಉಪಸ್ಥಿತರಿದ್ದರು