ನವದೆಹಲಿ: ಕರ್ನಾಟಕ ರಾಜ್ಯ ವಿಧಾನಪರಿಷತ್ ಉಪಚುನಾವಣೆಗೆ ಸಂಬಂಧಿಸಿದಂತೆ ತೆರವಾಗಿದ್ದ ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಘೋಷಿಸಿದೆ.ಸೋಮವಾರ ಸಂಜೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಕಾಂಗ್ರೆಸ್
ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್.ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಟಿಕೆಟ್ ಘೋಷಿಸಿದೆ.
ಅಥಣಿ ಶಾಸಕ ಲಕ್ಷ್ಮಣ್ ಸವದಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಆರ್.ಶಂಕರ್ರಿಂದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ತಿಪ್ಪಣ್ಣಪ್ಪ ಕಮಕನೂರು, ಬಾಬುರಾವ್ ಚಿಂಚನಸೂರು ಅವರಿಂದ ತೆರವಾದ ಸ್ಥಾನಕ್ಕೆ ಸಚಿವ ಎನ್.ಎಸ್.ಬೋಸರಾಜು ಅವರನ್ನು ಆಯ್ಕೆ ಮಾಡಲಾಗಿದೆ.