ಸುಳ್ಯ:ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಜು. 22 ರಂದು ಸುಳ್ಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆ ವಹಿಸಿದ್ದರು. ಮಡಿಕೇರಿ
ಆಕಾಶವಾಣಿಯ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಅವರನ್ನು ಸನ್ಮಾನಿಸಲಾಯಿತು. ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಸನ್ಮಾನ ನೆರವೇರಿಸಿದರು. ವಿಜಯ ಕರ್ನಾಟ ಪತ್ರಿಕೆಯ ಮುಖ್ಯ ಉಪ ಸಂಪಾದಕ ಆರ್.ಸಿ ಭಟ್ ಉಪನ್ಯಾಸ ನೀಡಿದರು. ದ.ಕ.ಜಿಲ್ಲಾ ಕಾಯ೯ನಿರತ ಪತ್ರಕತ೯ರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ತಾಲೂಕು ಪತ್ರಕರ್ತರ ಸಂಘದ ಗೌರವಾಧ್ಯಕ್ಷ ದಯಾನಂದ ಕಲ್ನಾರ್, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಚಿತ್ರಾ ಮಟ್ಟಿ ಪ್ರಾರ್ಥಿಸಿದರು. ಸಂಘದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಕುಕ್ಕೇಟ್ಟಿ ಸ್ವಾಗತಿಸಿದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೂಜಾಶ್ರೀ ವಿತೇಶ್ ಕೋಡಿ ಹಾಗೂ ಮಿಥುನ್ ಕರ್ಲಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.














