ಧರ್ಮಸ್ಥಳ: ಮೈಸೂರಿನಲ್ಲಿ ವಿಜ್ಞಾನ ಮತ್ತು ಆಧ್ಯಾತ್ಮಿಕತೆಗೆ ಸಂಬಂಧಪಟ್ಟ ಹೊಸ ವಸ್ತುಸಂಗ್ರಹಾಲಯ, ಉಡುಪಿಯಲ್ಲಿ ಆಯುರ್ವೇದ ಕಾಲೇಜಿಗೆ ನೂತನ ಕಟ್ಟಡ ನಿರ್ಮಾಣ, ಧಾರವಾಡದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಮತ್ತು ಫಾರ್ಮಸಿ ಕಾಲೇಜು ಸದ್ಯದಲ್ಲೇ ಪ್ರಾರಂಭವಾಗಲಿವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಧರ್ಮಸ್ಥಳದಲ್ಲಿ ಮಂಗಳವಾರ ಪಟ್ಟಾಭಿಷೇಕದ
೫೬ನೇ ವರ್ಧಂತ್ಯುತ್ಸವದ ಸಮಾರಂಭದಲ್ಲಿ ಮಾತನಾಡಿ ಹೊಸ ಯೋಜನೆಗಳನ್ನು ಪ್ರಕಟಿಸಿದರು.ಶಾಸಕ ಕೆ. ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ ಶುಭ ಹಾರೈಸಿದರು.
ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್. ಸುಪ್ರಿಯಾಹರ್ಷೇಂದ್ರ ಕುಮಾರ್. ಡಿ. ರಾಜೇಂದ್ರ ಕುಮಾರ್ ಮತ್ತು ನೀತಾ ರಾಜೇಂದ್ರ ಕುಮಾರ್, ಶ್ರದ್ಧಾಅಮಿತ್ ಮತ್ತು ಅಮಿತ್ ಉಪಸ್ಥಿತರಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮಾ ಸ್ವಾಗತಿಸಿದರು. ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಿತಿಯ ಸಂಚಾಲಕ ಲಕ್ಷ್ಮೀನಾರಾಯಣ ರಾವ್ ಧನ್ಯವಾದವಿತ್ತರು. ಎಸ್.ಡಿ.ಎಮ್. ಸನಿವಾಸ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುನಿಲ್ಪಂಡಿತ್ ಕಾರ್ಯಕ್ರಮ ನಿರ್ವಹಿಸಿದರು.












