ಧರ್ಮಸ್ಥಳ: ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರವಾಗಿದ್ದು, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಪೂಜ್ಯ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.ಅವರು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂದರ್ಭದಲ್ಲಿ ಆಶೀರ್ವಚನ ನೀಡಿದರು.ಮಹಾತ್ಮ ಗಾಂಧೀಜಿಯವರ
ಗ್ರಾಮರಾಜ್ಯದ ಮೂಲಕ ರಾಮರಾಜ್ಯದ ಕನಸನ್ನು ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆ ಮತ್ತು ಮನಪರಿವರ್ತನೆ ಮೂಲಕ ಮದ್ಯವರ್ಜನ ಶಿಬಿರದೊಂದಿಗೆ ನನಸಾಗಿ ಮಾಡಿದ್ದಾರೆ.
ಪ್ರಧಾನಿ ಮೋದಿಯವರ ವಿಕಸಿತ ಭಾರತ ಕಲ್ಪನೆಯನ್ನು ಅನುಷ್ಠಾನಗೊಳಿಸಿದ್ದಾರೆ. ಎಂದು ಅಭಿನಂದಿಸಿದರು.
ಹೊಸ ಯೋಜನೆಗಳು:
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೊಸ ಯೋಜನೆಗಳನ್ನು ಪ್ರಕಟಿಸಿದರು. ನೀವೆಲ್ಲರೂ ತೋರಿಸಿದ ಭಕ್ತಿ, ಪ್ರೀತಿ-ವಿಶ್ವಾಸ ಮತ್ತು ಗೌರವವನ್ನು ಶ್ರೀ ಸ್ವಾಮಿಗೆ ಅರ್ಪಿಸುವುದಾಗಿ ಹೆಗ್ಗಡೆಯವರು ತಿಳಿಸಿದರು.
ಶಾಸಕ ಹರೀಶ್ ಪೂಂಜ,ಕಂಚಿಕಾಮಕೋಟಿ ಪೀಠದ ಪ್ರತಿನಿಧಿ ಗುರುಚರಣಮೂರ್ತಿ ಶುಭಾಶಂಸನೆ ಮಾಡಿದರು.
ಡಾ. ವಿಘ್ನರಾಜ ಮತ್ತು ಡಾ. ಪವನ್ ಸಂಪಾದಿಸಿದ “ವೃಷಭೇಶ್ವರ” ಗ್ರಂಥವನ್ನು ಸ್ವಾಮೀಜಿ ಲೋಕಾರ್ಪಣೆ ಮಾಡಿದರು.ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಪ್ರಾಂಶುಪಾಲ ಸುನಿಲ್ ಪಂಡಿತ್ ಕಾರ್ಯಕ್ರಮ ನಿರ್ವಹಿಸಿದರು.















