ಸುಳ್ಯ:ಯೋಗದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸದೃಢಗೊಳ್ಳುತ್ತದೆ. ಇದು ಮನುಷ್ಯನ ಶಾರೀರಿಕ ಮತ್ತು ಮಾನಸಿಕ ಸದೃಢತೆಯ ಕೊಂಡಿಯಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ರಾಜ್ಯ ಅರೆಭಾಷೆ ಅಕಾಡೆಮಿಯ ಅಧ್ಯಕ್ಷ ಹಾಗೂ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು.ಅವರು ಸುಳ್ಯ ಕೆ. ವಿ ಜಿ ಆಯುರ್ವೇದ ಕಾಲೇಜು ಮತ್ತು ,
ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಇದರ ಸಹಯೋಗದಲ್ಲಿ ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೀಪಬೆಳಗಿಸಿ ಉದ್ಘಾಟಿಸಿ, ಮಾತನಾಡಿದರು.
ಆಯುರ್ವೇದ ಕಾಲೇಜಿನ ವೈದ್ಯೆ ಡಾ. ರಚನಾ ಆರ್. ಯೋಗ ದಿನಾಚರಣೆಯ ಮಹತ್ವವನ್ನು ವಿವರಿಸಿದರು.

ಯೋಗ ತರಬೇತಿಯನ್ನು ವೈದ್ಯರಾದ ಡಾ.ಹನುಮಂತ ಉತ್ತೂರ್, ಡಾ.ದರ್ಶನ್ ಶಿರಟ್ಟಿ, ಡಾ. ನೇಹ ಪಾಟೀಲ್, ಡಾ. ಗಾನವಿ ಎಂ. ನಡೆಸಿಕೊಟ್ಟರು.
ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ವಂದಿಸಿದರು. ಶಿಕ್ಷಕ ಶಿವಪ್ರಕಾಶ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಕಾರ್ಯಕ್ರಮಕ್ಕೆ ಸಹಕರಿಸಿದರು.