ಸುಳ್ಯ:ಜೆಸಿಐ ಸಪ್ತಾಹ 2024ನ್ನು ಈ ವರ್ಷ ಡೈಮಂಡ್ ಜೇಸಿ ವೀಕ್ ಆಗಿ ಒಂದು ವಾರಗಳ ಕಾಲ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಾಕಿಕೊಂಡು ಆಚರಿಸಲಾಗುತ್ತಿದ್ದು ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಒಂದು ವಾರಗಳ ಕಾಲ ನಡೆಯುವ ಜೇಸಿ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು
ವಲಯ ಉಪಾಧ್ಯಕ್ಷ ಅಭಿಷೇಕ್ ಜಿ.ಎಂ. ಉದ್ಘಾಟಿಸಿ, ಶುಭಹಾರೈಸಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಪಯಸ್ವಿನಿ ಜೇಸಿ ಅಧ್ಯಕ್ಷ ಗುರುಪ್ರಸಾದ್ ನಾಯಕ್ ವಹಿಸಿದ್ದರು. ಮುಖ್ಯ ಅತಿಥಿ ಗಳಾಗಿ ಪೂರ್ವ ವಲಯಾಧ್ಯಕ್ಷ ಅಶೋಕ್ ಚೂಂತಾರ್, ಶಾಲಾ ಮುಖ್ಯ ಶಿಕ್ಷಕಿ ಸುನಂದಾ ಶೆಟ್ಟಿ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರವಿರಾಜ್,
ಸಪ್ತಾಹ ನಿರ್ದೇಶಕರಾದ ಸುರೇಶ್ ಕಾಮತ್, ಜೊತೆ ಕಾರ್ಯದರ್ಶಿ ಜೇಸಿ ಪ್ರಸನ್ನ ಎಂ.ಆರ್, ಚಿತ್ರ ಕಲಾ ಶಿಕ್ಷಕರಾದ ಪ್ರಸನ್ನ ಐವರ್ನಾಡು, ಜೇಸಿಐ ಪಯಸ್ವಿನಿಯ ನಿಕಟ ಪೂರ್ವ ಅಧ್ಯಕ್ಷ ಜೇಸಿ ಹೆಚ್.ಜಿ.ಎಫ್ ನವೀನ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಫರ್ಧೆಯನ್ನು ಆಯೋಜಿಸಲಾಗಿತ್ತು. ಚಿತ್ರಕಲಾ ಶಿಕ್ಷಕರಾದ ಶ್ರೀಹರಿ ಪೈಂದೋಡಿ ಹಾಗೂ ಪ್ರಸನ್ನ ಐವರ್ನಾಡು ಸಹಕರಿಸಿದರು ಕಾರ್ಯಕ್ರಮದಲ್ಲಿ ಜೇಸಿಐಯ ಪೂರ್ವಾದ್ಯಕ್ಷರುಗಳು, ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದರು. ಜೇಸಿಐ ಸುಳ್ಯ ಪಯಸ್ವಿನಿಯ ಮಹಿಳಾ ಅಧ್ಯಕ್ಷೆ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿ, ಖಜಾಂಚಿ ಶೋಭಾ ಅಶೋಕ್ ಚೂಂತಾರು ಜೇಸಿವಾಣಿ ವಾಚಿಸಿ, ಜೇಸಿ. ಸುರೇಶ್ ಕಾಮತ್ ವಂದಿಸಿದರು.