ಸಂಪಾಜೆ: ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್.ಸಿ.ಅನಂತ, ಉಪಾಧ್ಯಕ್ಷರಾಗಿ ಯಶವಂತ ಡಿ.ಡಿ. ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಎನ್.ಸಿ.ಅನಂತ, ಉಪಾಧ್ಯಕ್ಷ ಸ್ಥಾನಕ್ಕೆ ಯಶವಂತ ಡಿ.ಡಿ. ಮಾತ್ರ ನಾಮಪತ್ರ ಸಲ್ಲಿಸಿದ್ದ ಕಾರಣ ಅವಿರೋಧ ಆಯ್ಕೆ ನಡೆಯಿತು.ಚುನವಣಾಧಿಕಾರಿ ಸಿದ್ದಲಿಂಗಮೂರ್ತಿ, ಕಾರ್ಯನಿರ್ವಹಣಾಧಿಕಾರಿ ಆನಂದ ಬಿ. ಕೆ. ಉಪಸ್ಥಿತರಿದ್ದರು.