ಸಂಪಾಜೆ:ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಎಲ್ಲಾ 13 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಕ್ಲೀನ್ ಸ್ವೀಪ್ ಮಾಡಿದ್ದಾರೆ. ಸಾಮಾನ್ಯ ಮೀಸಲು ಕ್ಷೇತ್ರದಿಂದ 6, ಸಾಲಗಾರರಲ್ಲದ ಕ್ಷೇತ್ರದಿಂದ 1, ಮಹಿಳಾ ಮೀಸಲು ಕ್ಷೇತ್ರದಿಂದ 2, ಹಿಂದುಳಿದ ವರ್ಗ ಎ, ಹಿಂದುಳಿದ ವರ್ಗ ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲು ತಲಾ ಒಂದೊಂದು ಸ್ಥಾನಗಳಿಂದ
ನಿರ್ದೇಶಕರ ಆಯ್ಕೆ ನಡೆಯಿತು.ಸಾಮಾನ್ಯ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾದ ಅನಂತ ಎನ್.ಸಿ.ಊರುಬೈಲು, ತೀರ್ಥಪ್ರಸಾದ್ ಕೋಲ್ಚಾರ್, ದಯಾನಂದ ಪನೇಡ್ಕ, ಯಶವಂತ ದೇವರಗುಂಡ, ರಾಮಮೂರ್ತಿ ಉಂಬಳೆ, ಹೊನ್ನಪ್ಪ ಕಾಸ್ಪಾಡಿ ಗೆಲುವು ಸಾಧಿಸಿದ್ದಾರೆ.
ಸಾಲಗಾರರಲ್ಲದ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿ ದಿನೇಶ್ ಸಣ್ಣಮನೆ ಗೆಲುವು ಸಾಧಿಸಿದ್ದಾರೆ.
ಮಹಿಳಾ ಮೀಸಲು ಕ್ಷೇತ್ರದಿಂದ ಸಹಕಾರ ಭಾರತಿಯ ಪ್ರಿಯಾಂಕಾ ಹೊಸೂರು ಹಾಗೂ ವಾಣಿ ಜಗದೀಶ್ ಗೆಲುವು ಸಾಧಿಸಿದ್ದಾರೆ.
ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಂಡರೀಕ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಸಹಕಾರ ಭಾರತಿಯ ಅಭ್ಯರ್ಥಿ ಕಿಶನ್ ಪೊನ್ನಾಟಿಯಂಡ, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪಕೀರ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ವಸಂತ ನಾಯ್ಕ ಗೆಲುವು ಸಾಧಿಸಿದ್ದಾರೆ.