ಮುಲ್ಲನ್ಪುರ: ಐಪಿಎಲ್ನ 4ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಕೂಪರ್ ಕನೊಲಿ ಅವರ ಏಕಾಂಗಿ ಹೋರಾಟದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವನ್ನು 3 ವಿಕೆಟ್ಗಳಿಂದ ಮಣಿಸಿ ಶುಭಾರಂಭ ಮಾಡಿದೆ.ಮೊದಲು ಬ್ಯಾಟ್ ಮಾಡಿದ ಗುಜರಾತ್ ತಂಡವು ನಿಗದಿತ 20 ಓವರ್ಗಳಲ್ಲಿ
6 ವಿಕೆಟ್ ಕಳೆದುಕೊಂಡು 163 ರನ್ ಕಲೆಹಾಕಿತು.164 ರನ್ಗಳ ಸಾಧಾರಣ ಗುರಿ ಬೆನ್ನಟ್ಟಿದ ಪಂಜಾಬ್ ತಂಡವು ಮಧ್ಯಮ ಕ್ರಮಾಂಕದಲ್ಲಿ ನಿರಂತರ ವಿಕೆಟ್ ಕಳೆದುಕೊಂಡು ಸೋಲಿನ ಸುಲಿಯಲ್ಲಿ ಸಿಲುಕಿತ್ತು. ಒಂದೆಡೆ ವಿಕೆಟ್ ಬೀಳುತ್ತಿದ್ದರೂ ಕೂಡ ಐಪಿಎಲ್ನಲ್ಲಿ ಇದೇ ಮೊದಲ ಪಂದ್ಯ ಆಡುತ್ತಿರುವ ಕೂಪರ್ ಕನೊಲಿ (72 ರನ್, 44ಎ, 4X5, 6X5) ಬಾರಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.ಪಂಜಾಬ್ ತಂಡ
19.1 ಓವರ್ನಲ್ಲಿ 7 ವಿಕೆಟ್ ಕಳೆದುಕೊಂಡು 165 ರನ್ ಗಳಿಸಿ ಗೆಲುವು ದಾಖಲಿಸಿತು. ಪ್ರಸಿದ್ಧ ಕೃಷ್ಣ ಭರ್ಜರಿ ಬೌಲಿಂಗ್ ಮೂಲಕ ಪಂಜಾಬನ್ನು ಕಾಡಿದರು.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡದ ಪರ ಶುಭಮನ್ ಗಿಲ್ (39 ರನ್) ಹಾಗೂ ಜೋಸ್ ಬಟ್ಲರ್ (38 ರನ್) ಗ್ಲೆನ್ ಫಿಲಿಪ್ಸ್ (25 ರನ್) ನೆರವಾದರು.
ಪಂಜಾಬ್ ಕಿಂಗ್ಸ್ ಪರ ಉತ್ತಮ ದಾಳಿ ನಡೆಸಿದ ವಿಜಯಕುಮಾರ್ ವೈಶಾಕ್ 3 ವಿಕೆಟ್ ಹಾಗೂ ಯುಜ್ವೆಂದರ್ ಚಹಾಲ್ 2 ವಿಕೆಟ್ ಪಡೆದು ಮಿಂಚಿದರು.









