ಧರ್ಮಶಾಲಾ: ಐಪಿಎಲ್ನ ನಿರ್ಣಾಯಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಲಖನೌ ಸೂಪರ್ ಜೈಂಟ್ಸ್ ವಿರುದ್ಧ 37 ರನ್ಗಳ ಗೆಲುವು ದಾಖಲಿಸಿದೆ. ಮೊದಲು ಬ್ಯಾಟ್ ಮಾಡಿದ ಪಂಜಾಬ್ ನಿಗದಿತ 20 ಓವರ್ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 236 ರನ್ಗಳ ಬೃಹತ್ ಮೊತ್ತ ಪೇರಿಸಿತು. ಗುರಿ ಬೆನ್ನಟ್ಟಿದ ಲಖನೌ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 199 ರನ್ ಗಳಿಸಿತು. ಆಯುಷ್ ಬದೋನಿ ಹಾಗು
ಅಬ್ದುಲ್ ಸಮದ್ ಮಾತ್ರ ಲಖನೌ ಪರ ಹೋರಾಟ ನಡೆಸಿದರು. ಬದೋನಿ 40 ಎಸೆತಗಳಲ್ಲಿ ತಲಾ 5 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 74 ರನ್ ಗಳಿಸಿದರು. ಸಮದ್ 24 ಎಸೆತಗಳಲ್ಲಿ ತಲಾ 2 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 45 ರನ್ ಗಳಿಸಿದರು. 73 ರನ್ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಲಖನೌಗೆ 81 ರನ್ ಜೊತೆಯಾಟ ಕಟ್ಟಿದ ಬದೋನಿ ಹಾಗೂ ಸಮದ್ ಹೋರಾಟ ನಡೆಸಿದರು. ಉಳಿದ ಬ್ಯಾಟರ್ಗಳು ನಿರಾಶಾದಾಯಕ ಪ್ರದರ್ಶನ ನೀಡಿದರು.
ಮೊದಲು ಬ್ಯಾಟ್ ಮಾಡಿದ ಪಂಜಾಬ್ ಪರ ಪ್ರಭಸಿಮ್ರನ್ ಸಿಂಗ್ ಭರ್ಜರಿ ಬ್ಯಾಟಿಂಗ್ ಮಾಡಿ 48 ಎಸೆತಗಳಲ್ಲಿ ಏಳು ಸಿಕ್ಸರ್ ಹಾಗೂ ಆರು ಬೌಂಡರಿಗಳ ನೆರವಿನಿಂದ 91 ರನ್ ಗಳಿಸಿದರು.ಜೋಶ್ ಇಂಗ್ಲಿಸ್ (30), ನಾಯಕ ಶ್ರೇಯಸ್ ಅಯ್ಯರ್ ಕೇವಲ 25 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 45 ರನ್ ಗಳಿಸಿದರು. ಶಶಾಂಕ್ ಸಿಂಗ್ 15 ಎಸೆತಗಳಲ್ಲಿ ಅಜೇಯ 33 ರನ್ ಗಳಿಸಿ (4 ಬೌಂಡರಿ, 1 ಸಿಕ್ಸರ್) ಅಬ್ಬರಿಸಿದರು. ಮಾರ್ಕಸ್ ಸ್ಟೋಯಿನಸ್ ಸಹ ಅಜೇಯ 15 ರನ್ಗಳ ಕಾಣಿಕೆ (1 ಸಿಕ್ಸರ್, 1 ಬೌಂಡರಿ) ನೀಡಿದರು.ಲಖನೌ ಪರ ಆಕಾಶ್ ಮಹಾರಾಜ್ ಸಿಂಗ್ ಹಾಗೂ ದಿಗ್ವೇಶ್ ರಾಠಿ ತಲಾ ಎರಡು ವಿಕೆಟ್ ಗಳಿಸಿದರು.







