ಮುಂಬೈ:ನಾಯಕ ಶ್ರೇಯಸ್ ಅಯ್ಯರ್ ಮತ್ತು ಆರಂಭಿಕ ಬ್ಯಾಟರ್ ಪ್ರಭ್ಸಿಮ್ರಾನ್ ಸಿಂಗ್ ಸಿಡಿಸಿದ ಸ್ಪೋಟಕ ಅರ್ಧ ಶತಕದ ಬಲದಿಂದ ಪಂಜಾಬ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ಗಳ ಸುಲಭ ಜಯ ದಾಖಲಿಸಿದೆ.ಅನುಭವಿ ರೋಹಿತ್ ಶರ್ಮಾ ಅಲಭ್ಯರಾಗಿರುವುದರಿಂದ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡ
ಕ್ವಿಂಟನ್ ಡಿಕಾಕ್, ಸಿಕ್ಕ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡು ಸಿಡಿಸಿದ ಶತಕ ವ್ಯರ್ಥವಾಯಿತು. ಮೊದಲು ಬ್ಯಾಟ್ ಮಾಡಿಸ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ಗೆ 195 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಪಂಜಾಬ್ 16.3 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿ ಗೆಲುವಿನ ನಗೆ ಬೀರಿತು.
ಪಂಜಾಬ್ ಪರ ಪ್ರಭ್ಸಿಮ್ರಾನ್ ಸಿಂಗ್ 39 ಎಸೆತಗಳಲ್ಲಿ 11 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಿಂದ ಅಜೇಯ 80 ರನ್ ಗಳಿಸಿದರು.ಶ್ರೇಯಸ್ ಅಯ್ಯರ್ 35 ಎಸೆತಗಳಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್ ನೇವಿನಿಂದ 66 ರನ್ ಸಿಡಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಪರ ಕ್ವಿಂಟನ್ ಡಿಕಾಕ್ 8 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ 112 ರನ್ ಗಳಿಸಿದರು. ನಮನ್ ಧಿರ್ 50 ರನ್ ಗಳಿಸಿದರು. ಪಂಜಾಬ್ ಪರ ಅರ್ಶದೀಪ್ ಸಿಂಗ್ ಮೂರು ವಿಕೆಟ್ ಪಡೆದರೆ, ಮಾರ್ಕೊ ಯಾನ್ಸನ್ ಮತ್ತು ಶಶಾಂಕ್ ಸಿಂಗ್ ಒಂದೊಂದು ವಿಕೆಟ್ ಕಿತ್ತರು.
















