ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏ.25 ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ತಿಳಿಸಿದ್ದಾರೆ. ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 25 ರಂದು ಪೂ.11ಕ್ಕೆ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಬೃಹತ್
ಚುನಾವಣಾ ಪ್ರಚಾರ ಸಭೆ ನಡೆಯಲಿದೆ. ಸುಳ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಎಐಸಿಸಿ ಅಧ್ಯಕ್ಷರು ಸುಳ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು ಅವರು ಹೇಳಿದರು.ಸುಳ್ಯದಲ್ಲಿ ಅಭ್ಯರ್ಥಿ ಅಯ್ಕೆ ಸಂಬಂಧಪಟ್ಟು ಉಂಟಾಗಿರುವ ಗೊಂದಲ, ಅಸಮಾಧಾನ ಸರಿಯಾಗಲಿದೆ. ಎಲ್ಲರಲ್ಲಿಯೂ ಮಾತುಕತೆ ನಡೆಸಿ ಅಸಮಾಧಾನವನ್ನು ಸರಿಪಡಿಸಿ ಎಲ್ಲರನ್ನೂ ಒಟ್ಟಾಗಿ ಸೇರಿಸಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ,
ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಪ್ರಮುಖರಾದ ಸರಸ್ವತಿ ಕಾಮತ್, ಸುರೇಶ್ ಎಂ.ಎಚ್, ಚಂದ್ರಲಿಂಗಂ, ಅನಿಲ್ ರೈ, ಶರೀಫ್ ಕಂಠಿ, ಮುತ್ತಪ್ಪ ಪೂಜಾರಿ ಉಪಸ್ಥಿತರಿದ್ದರು.