ಸುಳ್ಯ: ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದವರಿಗೆ ನಗರ ಪಂಚಾಯತ್ ದಂಡ ವಿಧಿಸಿದ ಘಟನೆ ನಡೆದಿದೆ. ಸುಳ್ಯ ನಗರದ ದೇವಸ್ಯ ರಸ್ತೆ ಬದಿಯಲ್ಲಿ ಕಸ ಎಸೆದವರಿಗೆ ನಗರ ಪಂಚಾಯತ್ ರೂ.2500 ದಂಡ ವಿಧಿಸಿದೆ. ಕಸ ಎಸೆದ ನಗರದ ವರ್ತಕರೋರ್ವರಿಗೆ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದ
ಕಾರಣಕ್ಕೆ ದಂಡ ವಿಧಿಸಲಾಗಿದೆ. ರಸ್ತೆ ಬದಿಯಲ್ಲಿ ಹಾಕಿದ ಕಸವನ್ನು ಪರಿಶೀಲಿಸಿದಾಗ ಕಸ ಎಸೆದವರನ್ನು ಪತ್ತೆ ಹಚ್ಚಲಾಗಿದೆ. ಆ ಹಿನ್ನಲೆಯಲ್ಲಿ ದಂಡ ವಿಧಿಸಲಾಗಿದೆ ಎಂದು ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ ತಿಳಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆಯುವುದು ಕಂಡು ಬಂದಲ್ಲಿ ದಂಡ ವಿಧಿಸುವುದು ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಾಧಿಕಾರಿ ತಿಳಿಸಿದ್ದಾರೆ.









