ಪೇರಡ್ಕ:ಪೇರಡ್ಕ – ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ವಾರ್ಷಿಕ ಉರೂಸ್ ಕಾರ್ಯಕ್ರಮ ಸಮಾರೋಪ ಸಮಾರಂಭ ಮತ್ತು ಸರ್ವ ಧರ್ಮ ಸೌಹಾರ್ದ ಸಮ್ಮೇಳನ ನಡೆಯಿತು.ಸಮಾರಂಭದಲ್ಲಿ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ. ಎ. ಗಫೂರ್ ಹಾಗೂ
ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅವರನ್ನು ಉರೂಸ್ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ

ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ) ಅಧ್ಯಕ್ಷ ಕೆ. ಎಂ. ಮುಸ್ತಫ, ಬೆಂಗಳೂರು ಫಾರ್ಮೆಡ್ ಗ್ರೂಪ್ ಉಪಾಧ್ಯಕ್ಷ ಡಾ. ಉಮ್ಮರ್ ಬೀಜದಕಟ್ಟೆ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ,ಕಲ್ಲುಗುಂಡಿ ವರ್ತಕರ ಸಂಘದ ಅಧ್ಯಕ್ಷ ಯು. ಬಿ. ಚಕ್ರಪಾಣಿ,
ಪ್ರಮುಖರಾದ ರಾಧಾಕೃಷ್ಣ ಬೊಳ್ಳೂರು, ಮೂಸ ಕುಂಞಿ ಪೈಂಬೆಚ್ಚಾಲ್, ಕೆ.ಎಸ್.ಉಮ್ಮರ್, ಖತೀಬರಾದ ಅಹಮ್ಮದ್ ನಈಂ ಫೈಝಿ, ಜಿ.ಕೆ.ಹಮೀದ್ ಗೂನಡ್ಕ, ಅಬ್ದುಲ್ ಖಾದರ್ ಮೊಟ್ಟೆಂಗಾರ್, ಇಕ್ಬಾಲ್ ಸುಣ್ಣಮೂಲೆ ಮೊದಲಾದವರು ಉಪಸ್ಥಿತರಿದ್ದರು












