ಸುಳ್ಯ:ಪೆರಾಜೆಯಲ್ಲಿ ಅರೆಭಾಷೆ ಸಮೃದ್ಧವಾಗಿದೆ, ಅರೆ ಭಾಷೆ ಮತ್ತು ಸಂಸ್ಕೃತಿ ಗಟ್ಟಿಯಾಗಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ನುಡಿದರು. ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಅರೆಭಾಷೆ ಕೂಡ್ಕಟ್ಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು
ಸಾಹಿತ್ಯ ಅಕಾಡೆಮಿ ವತಿಯಿಂದ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಪೆರಾಜೆ, ಪೆರಾಜೆ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟ ಮತ್ತೆ ಗ್ರಾಮ ಗೌಡ ಸಮಿತಿ ಪೆರಾಜೆ ಇವುಗಳ ಸಹಯೋಗದಲ್ಲಿ ಪೆರಾಜೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭವಾನಿಶಂಕರ ಹೊದ್ದೆಟ್ಟಿ, ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂದ್ರಕಲಾ ಬಾಲಚಂದ್ರ ಬಳ್ಳಡ್ಕ, ಪೆರಾಜೆ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಭವಾನಿ ಕೊಳಂಗಾಯ, ಪೆರಾಜೆ ಗ್ರಾಮ ಗೌಡ ಸಮಿತಿ ಅಧ್ಯಕ್ಷ ಕೆ.ಕೆ.ಪದ್ಮಯ್ಯ ಹಾಗೂ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಮನು ಪೆರುಮುಂಡ ಇದ್ದರು.
ಅರೆಭಾಷೆ ಕೂಡ್ಕಟ್ಟ್ – 2025 ಕಾರ್ಯಕ್ರಮದ ಪ್ರಯುಕ್ತ ನಡೆದ ವಿಚಾರಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಲೋಕೇಶ್ ಕುಂಚಡ್ಕ ‘ಅರೆಭಾಷೆ ಇಂದು ಮತ್ತು ನಾಳೆ’ ಎಂಬ ವಿಷಯದ ಬಗ್ಗೆ ಹಾಗೂ ಸಂಜೀವ ಕುದ್ಪಾಜೆ ಇವರು ‘ಅರೆಭಾಷೆರಲ್ಲಿ ಬದಲಾದ ಮದುವೆ ಕ್ರಮಗ’ ವಿಷಯಗಳ ಕುರಿತು ಮಾತನಾಡಿದರು. ನಂತರದಲ್ಲಿ ಸಭಿಕರೊಂದಿಗೆ ಸಂವಾದ ನಡೆಯಿತು. ಸೋಬಾನೆ, ಜೋಗುಳ ಪದ, ಅಜ್ಜಿಕತೆ, ಅರೆಭಾಷೆ ಕವನ ರಚನೆ ಕುರಿತ ಸ್ಫರ್ಧೆಗಳನ್ನು ನಡೆಸಲಾಯಿತು.
ಸಮಾರೋಪ ಕಾರ್ಯಕ್ರಮದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಶ್ರೀಶಾಸ್ತಾವು ದೇವಸ್ಥಾನ ಪೆರಾಜೆಯ ಮೊಕ್ತೇಸರರಾದ ಜಿತೇಂದ್ರ ನಿಡ್ಯಮಲೆ, ಸಂಪಾಜೆ ಹೋಬಳಿಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಚಿದಾನಂದ ಪೀಚೆಮನೆ, ಅಕಾಡೆಮಿ ಮಾಜಿ ಸದಸ್ಯೆ ಸಂಗೀತಾ ರವಿರಾಜ್, ಪೆರಾಜೆಯ ಚಿಗುರು ಯುವಕ ಮಂಡಲದ ಅಧ್ಯಕ್ಷ ರಮೇಶ್ ಮಜಿಕೋಡಿ ಉಪಸ್ಥಿದರಿದ್ದರು.
ಕಾರ್ಯಕ್ರಮದಲ್ಲಿ ಅಕಾಡೆಮಿಯ ಸದಸ್ಯ ಸಂಚಾಲಕರಾದ ಗೋಪಾಲ ಪೆರಾಜೆ ಇವರು ಪ್ರಾಸ್ತಾವಿಕ ಮಾತನಾಡಿದರು. ಅಕಾಡೆಮಿ ಸದಸ್ಯರಾದ ಚಂದ್ರಾವತಿ ಬಡ್ಡಡ್ಕ ನಿರೂಪಿಸಿದರು. ಡಾ. ಜ್ಞಾನೇಶ್ ಎನ್.ಎ ಸ್ವಾಗತಿಸಿದರು. ಸಂಜೀವಿನಿ ಒಕ್ಕೂಟದ ಶೀಲಾ ಚಿದಾನಂದ ನಿಡ್ಯಮಲೆ ಧನ್ಯವಾದ ಸಮರ್ಪಿಸಿದರು. ಸಂಜೀವಿನಿ ಒಕ್ಕೂಟದ ಸದಸ್ಯೆ ಕನಕಾಂಬಿಕ ಸಮಾರೋಪ ಸಮಾರಂಭದಲ್ಲಿ ಸ್ವಾಗತಿಸಿದರು.ಅಕಾಡೆಮಿ ಸದಸ್ಯ ಲೋಕೇಶ್ ಊರುಬೈಲು ಉಪಸ್ಥಿತರಿದ್ದರು.
















