ಪೆರಾಜೆ:ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಮರಿಗೆ ಪಲ್ಟಿಯಾದ ಘಟನೆ ಪೆರಾಜೆ ಸಮೀಪ ಜು.18ರಂದು ಬೆಳಿಗ್ಗೆ ಸಂಭವಿಸಿದೆ.ಕಾಸರಗೋಡಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು ಪೆರಾಜೆ ದಾಸರಹಿತ್ಲುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಮರಿಗೆ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.