ಪೆರಾಜೆ:ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ ನಡೆಯುತ್ತಿದ್ದು.ಮಾ.29ರಂದು ಬೇಟೆಕರಿಮಗನ್ ಈಶ್ವರನ್ ದೈವದ ಕೋಲ ಭಕ್ತರನ್ನು ಹರಸಿತು. ರಾತ್ರಿ 6.30ರಿಂದ ಪಳ್ಳಿಯಾರ ಬಾಗಿಲು ತೆರೆಯುವುದು, ಕರಿಂತಿರಿ ನಾಯರ್ ಪುಲಿಮಾರುತನ್ ದೈವಗಳ ಬೆಳ್ಳಾಟಗಳು, ಬೇಟೆ ಕರಿಮಗನ್ ಈಶ್ವರನ್ ಬೆಳ್ಳಾಟ ಹಾಗೂ

ತುಳು ಕೋಲದ ಬೆಳ್ಳಾಟಗಳು 2 ಮತ್ತು ಅವುಗಳ ತಿರುವಪ್ಪಗಳು 2 ನಡೆಯಲಿದೆ.
ಮಾ.28ರಂದು ರಾತ್ರಿ ತುಳು ಕೋಲ 2ರ ಬೆಳ್ಳಾಟ,
ಬೇಟೆ ಕರಿಮಗನ್ ಈಶ್ವರನ್ ಬೆಳ್ಳಾಟ ಮತ್ತು ಅವುಗಳ ತಿರುವಪ್ಪಗಳು ನಡೆಯಿತು.ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ್ ಅಮಚೂರು,ಸಹ ಕಾರ್ಯದರ್ಶಿ ಚಿನ್ನಪ್ಪ ಅಡ್ಕ,ದೇವತಕ್ಕರಾದ ರಾಜಗೋಪಾಲ ರಾಮಕಜೆ,
ತಕ್ಕ ಮುಖ್ಯಸ್ಥರು ಉಪಸ್ಥಿತರಿದ್ದರು.










