ಪೆರಾಜೆ: ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಮುಂಭಾಗದಲ್ಲಿ ರೂ.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ರಾಜಗೋಪುರ ಪಡ್ಪಿರೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿದರು. ಮಾಜಿ ವಿಧಾನಸಭಾ ಅಧ್ಯಕ್ಷ ಕೆ.ಜಿ. ಬೋಪಯ್ಯ ಅವರು ದಾನಿಗಳ ನಾಮಫಲಕವನ್ನು ಅನಾವರಣಗೊಳಿಸಿದರು.
ಆಡಳಿತ ಕಛೇರಿಯನ್ನು
ಶಾಸಕ ಪೊನ್ನಣ್ಣ , ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಕೆ.ಜಿ. ಬೋಪಯ್ಯ ಅವರು ಉದ್ಘಾಟಿಸಿದರು.ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು. ಶ್ರೀ ಶಾಸ್ತಾವು ದೇವಸ್ಥಾನದ ಆಡಳಿತ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ ಅಧ್ಯಕ್ಷತೆ ವಹಿಸಿದ್ದರು.

ಶಾಸಕಿ ಭಾಗೀರಥಿ ಮುರುಳ್ಯ, ಶಿಕ್ಷಣತಜ್ಞ ಪ್ರೊ. ಕೆ.ಇ. ರಾಧಾಕೃಷ್ಣ, ಮಾಜಿ ಶಾಸಕ ಕೆ.ಜಿ. ಬೋಪಯ್ಯ,ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಮಾತನಾಡಿದರು. ಇದೇ ಸಂದರ್ಭದಲ್ಲಿ ಶ್ರೀ ಶಾಸ್ತಾವು ದೇವರ ಸುಪ್ರಭಾತ ಧ್ವನಿಸುರುಳಿಯನ್ನು ಬಿಡುಗಡೆಗೊಳಿಸಲಾಯಿತು.
ಮುಖ್ಯ ಅತಿಥಿಗಳಾಗಿ ಪೆರಾಜೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಚಂದ್ರಕಲಾ ಬಾಲಚಂದ್ರ, ತಲಕಾವೇರಿ ಕ್ಷೇತ್ರದ ತಕ್ಕಮುಖ್ಯಸ್ಥ ಕೋಡಿ ಮೋಟಯ್ಯ, ದೇವತಕ್ಕ ರಾಜಗೋಪಾಲ ರಾಮಕಜೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ್ ಅಮಚೂರು, ಸಹ ಕಾರ್ಯದರ್ಶಿ ಚಿನ್ನಪ್ಪ ಅಡ್ಕ ಉಪಸ್ಥಿತರಿದ್ದರು.ದೇವಾಲಯದ ಆಡಳಿತ ಕಾರ್ಯದರ್ಶಿ ತೇಜಪ್ರಸಾದ್ ಅಮಚೂರು ವಂದಿಸಿದರು. ಮನೋಜ್ ನಿಡ್ಯಮಲೆ ಕಾರ್ಯಕ್ರಮ ನಿರೂಪಿಸಿದರು.