ಪೆರಾಜೆ:ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ನೂತನ ರಾಜಗೋಪುರ ನಿರ್ಮಾಣಕ್ಕೆ ಶಂಕುಸ್ಥಾಪನೆ ಜೂ.7ರಂದು ನಡೆಯಿತು. ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಉಚ್ಚಿಲ್ಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವೈಧಿಕ ಕಾರ್ಯಕ್ರಮಗಳು ನಡೆಯಿತು. ಶಿಕ್ಷಣ ತಜ್ಞರು ಹಾಗೂ ಸಾಹಿತಿಗಳಾದ ಪ್ರೊ.ಕೆ.ಇ.ರಾಧಾಕೃಷ್ಣ ಶಿಲಾನ್ಯಾಸ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ
ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ,ಭಾರತ್ ಆಗ್ರೋ ಮಾಲಕರಾದ ರಾಮಚಂದ್ರ.ಪಿ, ಶಿಲ್ಪ ಶಾಸ್ತ್ರಜ್ಞರಾದ ರಮೇಶ್ ಕಾರಂತ ಬೆದ್ರಡ್ಕ ಭಾಗವಹಿಸಿದ್ದರು. ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ ಅಮೆಚೂರು, ಸಹ ಕಾರ್ಯದರ್ಶಿ ಚಿನ್ನಪ್ಪ ಅಡ್ಕ, ದೇವತಕ್ಕರಾದ ರಾಜಗೋಪಾಲ ರಾಮಕಜೆ, ತಕ್ಕ ಮುಖ್ಯಸ್ಥರು, ಆಡಳಿತ ಸಮಿತಿ ಸದಸ್ಯರು, ಮಾಜಿ ಮೊಕ್ತೇಸರರು, ಆಡಳಿತ ಸಮಿತಿ ಸದಸ್ಯರುಗಳು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.ಬಳಿಕ ಸಭಾ ಕಾರ್ಯಕ್ರಮ ನಡೆಯಿತು.