ಪುತ್ತೂರು:ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಪುತ್ತೂರು ಇವರಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಡೆಯುವ ಜಿಎಲ್ ಆಚಾರ್ಯ ಸಂಸ್ಮರಣೆ ಮತ್ತು ಶಿಕ್ಷಕರ ದಿನಾಚರಣೆ ಅಂಗವಾಗಿ ನಿವೃತ್ತ ಶಿಕ್ಷಕ ಹಾಗು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ್ ಪೆರಾಲ್ ಅವರಿಗೆ
ಆಚಾರ್ಯ ಪುರಸ್ಕಾರ ನೀಡಿ ಗೌರವಿಸಲಾಯಿತು. ಪುತ್ತೂರು ಜಿಎಲ್ ಆಚಾರ್ಯ ಸಭಾಭವನ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಜಿ ಎಲ್ ಆಚಾರ್ಯ ಜುವೆಲ್ಲರ್ಸ್ ಸಂಸ್ಥೆಯ ಪಾಲುದಾರರಾದ ಲಕ್ಷ್ಮೀನಾರಾಯಣ ಆಚಾರ್ಯ ಅವರು ಆಚಾರ್ಯ ಪುರಸ್ಕಾರ ಪ್ರದಾನ ಮಾಡಿದರು. ವಿಶ್ರಾಂತ ಪ್ರಾಧ್ಯಾಪಕರಾದ ವಸಂತಕುಮಾರ್ ತಾಳ್ತಜೆ, ಜಿಎಲ್ ಆಚಾರ್ಯ ಸಂಸ್ಥೆಯ ಮಾಲಕ ಬಲರಾಮ ಆಚಾರ್ಯ, ಜಯಾನಂದ ಪೆರಾಜೆ ಮತ್ತು ಡಾಕ್ಟರ್ ಶಾಂತಾ ಪುತ್ತೂರು ಮತ್ತಿತರರು ಉಪಸ್ಥಿತರಿದ್ದರು.










