ಪೇರಾಲು: ಪೇರಾಲು ಬಜಪ್ಪಿಲ ಶ್ರೀ ಇರುವೆರ್ ಉಳ್ಳಾಕುಲು ಧೂಮಾವತಿ ಪರಿವಾರ ದೈವಸ್ಥಾನಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಇಂದು ಮತ್ತು ನಾಳೆ ನಡೆಯಲಿದೆ. ಇದರ ಅಂಗವಾಗಿ ಶನಿವಾರ ಬೆಳಗ್ಗೆ ಹಸಿರುವಾಣಿ ಮೆರವಣಿಗೆ ನಡೆಯಿತು. ಪೇರಾಲು ಶ್ರೀರಾಮ ಭಜನಾ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ಹಸಿರುವಾಣಿ ಮೆರವಣಿಗೆ ಆರಂಭಗೊಂಡಿತು. ಬಳಿಕ
ಬಜಪ್ಪಿಲ ದೈವಸ್ಥಾನದ ಅನುವಂಶಿಕ ಮೊಕ್ತೇಸರರಾದ ಹೇಮಂತ್ ಕುಮಾರ್ ಗೌಡರಮನೆ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು.ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಬಾಳೆಕೋಡಿ, ಪ್ರಧಾನ ಕಾರ್ಯದರ್ಶಿ ಶ್ರೀಹರಿ ಕುಕ್ಕುಡೇಲು, ಸಂಚಾಲಕರಾದ ಜಯರಾಮ ಗೌಡರಮನೆ, ಕೋಶಾಧಿಕಾರಿ ತೀರ್ಥೆಶ್ ಬಲಂದೋಟಿ, ಆಡಳಿತ ಸಮಿತಿ ಕಾರ್ಯದರ್ಶಿ ಪ್ರವೀಣ್ ಕುಮಾರ್ ಬಾಳೆಕೋಡಿ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿಗಳಾದ, ಮಂಜುನಾಥ ಪಿ. ಪೇರಾಲು, ದಾಮೋದರ ಮಿತ್ತಪೇರಾಲು, ರಾಜಣ್ಣ ಪೇರಾಲುಮೂಲೆ,
ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ, ಪೇರಾಲು ಹದಿನಾರು ಸೇರಿದಂತೆ ಊರ, ಪರವೂರ ಭಕ್ತರು ಮೆರವಣಿಯಲ್ಲಿದ್ದರು. ನೂರಾರು ವಾಹನಗಳು ಮೆರವಣಿಗೆಯಲ್ಲಿ ಸಾಗಿದವು.
ಸಂಜೆ ತಂತ್ರಿಗಳ ಆಗಮನದ ಬಳಿಕ, ಮಂಗಳೂರು ಆದಿಚುಂಚನಗಿರಿ ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿಗಳು ಆಗಮಿಸಲಿದ್ದಾರೆ. ರಾತ್ರಿ ನಡೆಯುವ ಸಭಾಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡುವರು.