ಸುಳ್ಯ:ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಹಾಗು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸನ್ಮಾನ ಕಾರ್ಯಕ್ರಮ ಸೆ.12 ರಂದು ಅ.2ಕ್ಕೆ ಕನ್ನಡ ಭವನದಲ್ಲಿ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು
ಘಟಕ, ಗೌಡರ ಯುವ ಸೇವಾ ಸಂಘ ಸುಳ್ಯ, ರೋಟರಿ ಕ್ಲಬ್ ಸುಳ್ಯ, ಲಯನ್ಸ್ ಕ್ಲಬ್ ಸುಳ್ಯ, ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ, ಯುವಜನ ಸಂಯುಕ್ತ ಮಂಡಳಿ ಸುಳ್ಯ,ವರ್ತಕರ ಸಂಘ ಸುಳ್ಯ, ಜೇಸಿಐ ಸುಳ್ಯ ಪಯಸ್ವಿನಿ, ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ಆಶ್ರಯದಲ್ಲಿ ಡಾ.ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪಡೆದ ಪೇರಾಲು ಅವರನ್ನು ಸನ್ಮಾನಿಸಲಾಗುವುದು.
ಸಮಾರಂಭದ ಅಧ್ಯಕ್ಷತೆಯನ್ನು ಕಸಾಪ ಮಾಜಿ ಅಧ್ಯಕ್ಷೆ ಎಂ.ಮೀನಾಕ್ಷಿ ಗೌಡ ವಹಿಸಲಿದ್ದಾರೆ. ಉದ್ಘಾಟನೆಯನ್ನು ಎಒಎಲ್ಇ ಅಧ್ಯಕ್ಷ ಕೆ.ವಿ.ಚಿದಾನಂದ ನೆರವೇರಿಸಲಿದ್ದಾರೆ. ಸುಳ್ಯ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ ಸನ್ಮಾನಿಸಲಿದ್ದಾರೆ.ಹಿರಿಯ ಸಾಹಿತಿಗಳಾದ ಡಾ.ಪ್ರಭಾಕರ ಶಿಶಿಲ ಅಭಿನಂದನಾ ಭಾಷಣ ಮಾಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.











