ಪೆರ್ನಾಜೆ:ಪೆರ್ನಾಜೆ ಸೀತಾರಾಘವ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಸಾಂಸ್ಕೃತಿಕ ಉತ್ಸವ ನಡೆಯಿತು. ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕರು ಹಾಗೂ ಹವ್ಯಾಸಿ ಬರಹಗಾರರಾದ ಕುಮಾರ್ ಪೆರ್ನಾಜೆ ಭಾಗವಹಿಸಿದ್ದರು. ಹಳೆಯ ವಿದ್ಯಾರ್ಥಿ ದೇವಣ್ಣ ರೈ ಜ್ಯೋತಿ ಬೆಳಗಿಸುವುದರ ಮೂಲಕ
ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಡಳಿತ ಮಂಡಳಿಯ ಕಾರ್ಯದರ್ಶಿ ಕೊಚ್ಚಿ ಕೃಷ್ಣ ಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನಿರ್ದೇಶಕರು ಮತ್ತು ಸಂಸ್ಥೆಯ ಹಿರಿಯ ವಿದ್ಯಾರ್ಥಿಯಾದ ಆಶ್ಲೇಷ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯರಾದ ಮಂಟ್ಯಯ್ಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸುಜಾತಾ ವಂದಿಸಿದರು. ಶಿಕ್ಷಕಿಯಾದ ಚರೀಷ್ಮಾ ಕಾರ್ಯಕ್ರಮ ನಿರೂಪಿಸಿದರು ಕಾರ್ಯಕ್ರಮದಲ್ಲಿ ಸಂಸ್ಥೆಯ ಬೋಧಕವೃಂದ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು












