ಪೆರುವಾಜೆ: ಪೆರುವಾಜೆಯ ಡಾ.ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಘಟಕ ಉದ್ಘಾಟನೆಗೊಂಡಿತು.
ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ ಕೆ.ಎಂ ಉದ್ಘಾಟಿಸಿದರು. ಜೀವನದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿದ ಬಗೆ ಮತ್ತು ಪರೀಕ್ಷೆಗಳಿಗೆ ಅವರು ಮಾಡಿಕೊಂಡ ತಯಾರಿ
ಕುರಿತು ಮಾಹಿತಿ ನೀಡಿದ ಅವರು ವಿದ್ಯಾರ್ಥಿಗಳು ಸ್ಪರ್ಧಾತ್ಮಕತೆ ರೂಢಿಸಿಕೊಳ್ಳಬೇಕೆಂದು ಕರೆ ನೀಡಿದರು.ಕರಾವಳಿಯ ಸರಕಾರಿ ಕಾಲೇಜುಗಳಲ್ಲಿ ಈ ರೀತಿಯ ಪ್ರಯತ್ನ ಶ್ಲಾಘನೀಯವಾದದ್ದು, ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಆಶಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ದಾಮೋದರ ಕಣಜಾಲು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಭಾಗದ ಸರಕಾರಿ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರವ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕುರಿತು, ಅರಿವು, ಮಾಹಿತಿ ಮತ್ತು ತರಬೇತಿ ನೀಡುವ ಹಿತದೃಷ್ಟಿಯಿಂದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಘಟಕವನ್ನು ಕಾಲೇಜಿನಲ್ಲಿ
ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿ ಲಭ್ಯವಿರುವ ಸ್ಪರ್ಧಾತ್ಮಕ ಪರೀಕ್ಷಾ ವಿಭಾಗದ ಸದುಪಯೋಗ ಪಡೆದುಕೊಂಡು, ಈ ಘಟಕದ ಅನುಕೂಲತೆ ಪಡೆದು ಔದ್ಯೋಗಿಕವಾಗಿ ಉತ್ತಮ ಸಾಧನೆ ಮಾಡಬೇಕೆಂದು ಹೇಳಿದರು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ಜ್ಯೋತಿ ಎಸ್, ವಿದ್ಯಾರ್ಥಿ ಕ್ಷೇಮ ಪಾಲಕರಾದ ಕಾಂತರಾಜು ಸಿ. ಉದ್ಯೋಗ ಕೋಶದ ಸಂಚಾಲಕರುಗಳಾದ ಡಾ.ರಾಮಚಂದ್ರ. ಕೆ, ಪ್ರತಿಮಾ, ಹಾಗೂ ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ದ್ವಿತೀಯ ಎಂಕಾಂ ವಿದ್ಯಾರ್ಥಿನಿ ಕ
ಆರ್ಶಿಯಾ ಕಾರ್ಯಕ್ರಮ ನಿರೂಪಿಸಿದರು. ಎಂಕಾಂ ವಿದ್ಯಾರ್ಥಿನಿ ಪ್ರಜ್ಞಾ ಮತ್ತು ತಂಡ ಪ್ರಾರ್ಥಿಸಿದರು. ದ್ವಿತೀಯ ಬಿಎಸ್ ಡಬ್ಲ್ಯೂ ವಿದ್ಯಾರ್ಥಿನಿ ದೀಕ್ಷಿತಾ ಸ್ವಾಗತಿಸಿ, ತೃತೀಯ ಬಿಕಾಂ ವಿದ್ಯಾರ್ಥಿ ಶ ನವಜೀತ್ ವಂದಿಸಿದರು.