ಪೆರುವಾಜೆ:ಬೆಳ್ಳಾರೆ ಪೆರುವಾಜೆಯ ಡಾ ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ ರಾಷ್ಟ್ರದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳುವುದು ಅಗತ್ಯ ಎಂದು
ಹೇಳಿದರು. ಮುಖ್ಯ ಭಾಷಣಕಾರರಾಗಿದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿನ ಹಿಂದಿ ಸಹಾಯಕ ಪ್ರಾಧ್ಯಪಕರು ಹಾಗೂ ರಾಷ್ಟೀಯ ಸೇವಾ ಯೋಜನೆಯ ಕಾರ್ಯಕ್ರಮಧಿಕಾರಿ ಪ್ರೊ. ರಾಮಕೃಷ್ಣ ಕೆ. ಎಸ್. ಇವರು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಂಯಮ ಬೆಳೆಸುವುದರಲ್ಲಿ ಎನ್ಎಸ್ಎಸ್ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ನುಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಬಾಲಸುಬ್ರಹ್ಮಣ್ಯ ಪಿ.ಎಸ್. ವಹಿಸಿದ್ದರು.
ಶಿಬಿರಧಿಕಾರಿಗಳಾದ ಗಿರೀಶ್ ಸಿ ಆರ್ ಶಿಬಿರದ ಕುರಿತು ಪ್ರಾಸ್ತವಿಕ ನುಡಿಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ವನಿತ ಸುವರ್ಣ,ಅಧ್ಯಕ್ಷರು, ಮುರುಳ್ಯ ಗ್ರಾಮ ಪಂಚಾಯತ್ , ಲಿಂಗಪ್ಪ ಬೆಳ್ಳಾರೆ, ಶಿಕ್ಷಕರು, ಸರಕಾರಿ ಪ್ರೌಢಶಾಲೆ, ಎಣ್ಮೂರು, ಮೇದಪ್ಪ ಗೌಡ, ಅಧ್ಯಕ್ಷರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಸರಕಾರಿ ಪ್ರೌಢಶಾಲೆ, ಎಣ್ಮೂರು ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ಳಾರ-ಪೆರುವಾಜೆ ಇದರ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ರವಿಕುಮಾರ್ ಕಿರಿಭಾಗ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಸಚಿನ್ ರಾಜ್ ಶೆಟ್ಟಿ, ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಕ್ಷಿತ್ ಕುಮಾರ್ ಪೆರುವಾಜೆ ಇವರು ಉಪಸ್ಥಿತರಿದ್ದರು. ಸಹ ಶಿಬಿರಾಧಿಕಾರಿಗಳಾದ ಕಿರಣ್ ಎ. ಎಸ್. ಮತ್ತು ಶಾಲಿನಿ ಆರ್. ಇವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸ್ವಯಂಸೇವಕರಾದ ದೀಪಿಕಾ ಅತಿಥಿಗಳನ್ನು ಸ್ವಾಗತಿಸಿ, ರಕ್ಷಿತಾ ವಂದನಾರ್ಪಣೆಗೈದರು. ಮೋಕ್ಷ ಮತ್ತು ಬಳಗ ಆಶಯಗೀತೆಯನ್ನು ಪ್ರಸ್ತುತ ಪಡಿಸಿದರು. ಶ್ರೇಯಾ ಕಾರ್ಯಕ್ರಮವನ್ನು ನಿರೂಪಿಸಿದರು.