ಪೆರುವಾಜೆ: ಡಾ. ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ 2022-23 ನೇ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾಕೂಟ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಧ್ವಜಾರೋಹಣ ನೆರವೇರಿಸಿ ದೀಪ ಪ್ರಜ್ವಜನೆ ಮಾಡಿ ಕ್ರೀಡಾಕೂಟವನ್ನು ಉದ್ಘಾಟಿಸಿ
ಶುಭ ಹಾರೈಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಪದ್ಮನಾಭ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ದಾಮೋದರ ಕಣಜಾಲು ‘ವ್ಯಕ್ತಿಯೊಬ್ಬ ತನ್ನ ಬದುಕಿನಲ್ಲಿ ಜೀವನೋತ್ಸಾಹವನ್ನು ಹೊಂದಲು ಕ್ರೀಡೆ ಸಹಕಾರಿ ಎಂದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಮಚಂದ್ರ ಕೆ. ಐಕ್ಯುಎಸಿ ಸಹ ಸಂಚಾಲಕರಾದ ಮಂಜುನಾಥ ಸಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಕಾಂತರಾಜು ಸಿ, ಸಾಂಸ್ಕೃತಿಕ ಸಂಘದ ಸಂಚಾಲಕರಾದ ಯತೀಶ್ ಕುಮಾರ್ ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಯರಾದ ನೀಶ್ಮಾ ಕೆ.ವಿ ಸ್ವಾಗತಿಸಿ, ಮಾನಸ ವಿ.ಜಿ ವಂದಿಸಿದರು.ದೀಕ್ಷಿತಾ ಬಿ.ಎಲ್ ಕಾರ್ಯಕ್ರಮ ನಿರೂಪಿಸಿದರು.