ಪೆರುವಾಜೆ: ಪೆರುವಾಜೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಕೋಶ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ “ಪ್ಯೂಚರ್ ಡಬಲ್ ಪ್ಲಸ್” ಎಂಬ ವಿಷಯದ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು
ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಜೆಸಿಐ ರಾಷ್ಟ್ರೀಯ ತರಬೇತುದಾರರಾದ ಕೃಷ್ಣಮೋಹನ್ ಪಿ.ಎಸ್ ಅವರು ಆಗಮಿಸಿ ವೃತ್ತಿ ಆಧಾರಿತ ಅವಶ್ಯಕತೆಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ದಾಮೋದರ ಕಣಜಾಲು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಕಾಂತರಾಜು ಸಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಹರ್ಷಿತ ಕೆ.ಎಸ್ ಉಪಸ್ಥಿತರಿದ್ದರು. ದ್ವಿತೀಯ ಎಂ.ಕಾಂ ವಿದ್ಯಾರ್ಥಿಗಳಾದ ಪವಿತ್ರ.ಎಸ್ ಸ್ವಾಗತಿಸಿ ಹೇಮಂತ್ ವಂದಿಸಿದರು. ಆತ್ಮಿಕ ಕಾರ್ಯಕ್ರಮ ನಿರೂಪಿಸಿದರು.