ಪೆರುವಾಜೆ: ಪೆರುವಾಜೆಯ ಡಾ.ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಪೂರಕವಾಗಿ ವಿದ್ಯಾರ್ಥಿಗಳಿಂದ ಕೊಡುಗೆಗಳನ್ನು ಸಂಗ್ರಹಿಸುವ ಉದ್ದೇಶದಿಂದ
“ವಾರದ ಜೋಳಿಗೆ” ಎಂಬ ವಿನೂತನ ಯೋಜನೆಯನ್ನು ಪ್ರಾರಂಭಿಸಲಾಯಿತು. ವಾರದಲ್ಲಿ ಒಂದು ದಿನ ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಬೆಳೆದ ತರಕಾರಿ, ತೆಂಗಿನಕಾಯಿ ಅಥವಾ ಇತರೆ ಸಾಂಬಾರ ಪದಾರ್ಥಗಳನ್ನು ಸಂಗ್ರಹಿಸಿ ಬಿಸಿಯೂಟದ ಯೋಜನೆಯನ್ನು ನಿರ್ವಹಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕಾಲೇಜಿನ ಪ್ರಾಂಶುಪಾಲರಾದ ದಾಮೋದರ ಕಣಜಾಲು ಯೋಜನೆಯನ್ನು ಜೋಳಿಗೆ ತುಂಬುವ ಮೂಲಕ ಉದ್ಘಾಟಿಸಿದರು. ವಿದ್ಯಾರ್ಥಿ ಕ್ಷೇಮ ಪಾಲಕರಾದ ಕಾಂತರಾಜು ಸಿ. ವಿದ್ಯಾರ್ಥಿ ಪರಿಷತ್ತಿನ ಸಂಚಾಲಕರಾದ ಯತೀಶ್ ಕುಮಾರ್, ಐಕ್ಯೂಎಸಿ ಸಂಚಾಲಕರಾದ
ಜ್ಯೋತಿ ಎಸ್ ಹಾಗೂ ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.