ಪೆರುವಾಜೆ:ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಮಂಗಳವಾರ ರಾತ್ರಿ ಧ್ವಜಾರೋಹಣ ನೆರವೇರಿತು.ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನ ನಡೆಯಿತು.ಈ ಸಂದರ್ಭದಲ್ಲಿ
ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ದ.ಕ.ಸಂಸದ ನಳಿನ್ ಕುಮಾರ್ ಕಟೀಲು, ಶಾಸಕಿ ಭಾಗೀರಥಿ ಮುರುಳ್ಯ, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ, ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ವ್ಯವಸ್ಥಾಪನ ಸಮಿತಿ ಸದಸ್ಯರಾದ ಪಿ. ವೆಂಕಟಕೃಷ್ಣರಾವ್, ಜಯಪ್ರಕಾಶ್ ರೈ, ದಾಮೋದರ ನಾಯ್ಕ, ನಾರಾಯಣ ಕೊಂಡೆಪ್ಪಾಡಿ, ಜಗನ್ನಾಥ ರೈ, ಭಾಗ್ಯಲಕ್ಷ್ಮಿ, ಯಶೋದ ಎ,ಎಸ್., ಕ್ಷೇತ್ರದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ, ಮಾಜಿ ಸದಸ್ಯರಾದ ರೈ ಬೆಳ್ಳಾರೆ, ಭೋಜರಾಜ ಶೆಟ್ಟಿ ಕಲ್ಕಂಪಾಡಿಗುತ್ತು, ಕುಂಬ್ರ ದಯಾಕರ ಆಳ್ವ, ಉಮೇಶ್ ಕೊಟ್ಟೆಕಾಯಿ, ಕ್ಷೇತ್ರದ ಕಚೇರಿ ವ್ಯವಸ್ಥಾಪಕ ವಸಂತ ಪೆರುವಾಜೆ ಮೊದಲಾದವರು ಉಪಸ್ಥಿತರಿದ್ದರು.









