ಪೆರುವಾಜೆ:ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕಿನ 21 ಗ್ರಾಮಗಳ ಮಾಗಣೆ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವಕ್ಕೆ ಪ್ರತಿ ದಿನ ಮಧ್ಯಾಹ್ನ ಹಾಗೂ ರಾತ್ರಿ ಭಕ್ತರ ಮಹಾಪೂರವೇ ಹರಿದು ಬರುತಿದೆ.ಕ್ಷೇತ್ರಕ್ಕೆ ವಿವಿಧ
ಗ್ರಾಮಗಳಿಂದ ಆಗಮಿಸಿದ ಭಕ್ತರು ದೇವಿಯ ದರ್ಶನ ಪಡೆದು ರಂಗಪೂಜೆ ಸಹಿತ ವಿವಿಧ ಸೇವೆಗಳನ್ನು ಸಮರ್ಪಿಸಿದರು. 21 ಗ್ರಾಮಗಳ ಮಾಗಣೆ ಕ್ಷೇತ್ರವಾಗಿರುವ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನವು ಸುತ್ತಮುತ್ತಲಿನ ಗ್ರಾಮಗಳ ಭಕ್ತರ ಪ್ರಮುಖ ಆರಾಧನಾ ಕೇಂದ್ರವಾಗಿದೆ. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಎರಡೂ ಹೊತ್ತಿನಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ.
ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುನಿಲ್ ಕುಮಾರ್ ರೈ ಪೆರುವಾಜೆಗುತ್ತು ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದು ನವರಾತ್ರಿ ಉತ್ಸವದ ಮೇಲುಸ್ತುವಾರಿ ವಹಿಸುತ್ತಿದ್ದಾರೆ.










