ಪೆರುವಾಜೆ: ಎನ್ಎಸ್ಎಸ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಿಸಿಕೊಂಡಾಗ ಅದು ಪ್ರತಿಯೊಬ್ಬ ವ್ಯಕ್ತಿ ಬದುಕಿಗೂ ಕೂಡ ಉತ್ತಮ ತಳಹದಿಯನ್ನು ಹಾಕಿಕೊಡುತ್ತದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇಲ್ಲಿನ ಪ್ರಾಂಶುಪಾಲರಾದ ಪ್ರೋ ಸುಬ್ಬಪ್ಪ ಕೈಕಂಬ ಅಭಿಪ್ರಾಯಪಟ್ಟಿದ್ದಾರೆ. ಅವರು ಪೆರುವಾಜೆಯ
ಡಾ.ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ, ಇಲ್ಲಿನ ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಕೆಪಿಎಸ್ ಕೆಯ್ಯೂರು ಇಲ್ಲಿ ಉದ್ಘಾಟಿಸಿ ಮಾತನಾಡಿದರು. ಎನ್ಎಸ್ಎಸ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣವಾಗುವುದರ ಜೊತೆಗೆ ವಿದ್ಯಾರ್ಥಿಗಳು ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಪ್ರೇರೇಪಣೆ ನೀಡುತ್ತದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅತಿಥಿಗಳಾಗಿ ಕೆಪಿಎಸ್ ಕೆಯ್ಯೂರು ಇದರ ಕಾರ್ಯಧ್ಯಕ್ಷರಾದ ಎ.ಕೆ ಜಯರಾಮ ರೈ, ಕೆಪಿಎಸ್ ಕೆಯ್ಯೂರು ಇದರ ಪ್ರಾಂಶುಪಾಲರಾದ ಇಸ್ಮಾಯಿಲ್.ಪಿ ಹಾಗೂ ಅತಿಥಿಗಳಾಗಿ ಆನಂದ ರೈ ದೇವಿನಗರ ಇವರು ಭಾಗವಹಿಸಿದ್ದರು. ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ದಾಮೋದರ ಕಣಜಾಲು ರಾಷ್ಟ್ರೀಯ ಸೇವಾಯೋಜನೆಯ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯಗಳನ್ನು ತುಂಬಲು ಸಹಕಾರಿ ಎಂದು ಅಭಿಪ್ರಾಯಪಟ್ಟರು. ಎನ್ಎಸ್ಎಸ್ ಯೋಜನಾಧಿಕಾರಿಗಳಾದ ಪ್ರೊ.ಗಿರೀಶ ಸಿ.ಆರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರಾವ್ಯ ಮತ್ತು ತಂಡದ ಸದಸ್ಯರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದ ಸ್ವಾಗತವನ್ನು ಜನನಿ ಪ್ರಥಮ ಬಿಎಸ್ಡಬ್ಲ್ಯೂ ನೆರವೇರಿಸಿದರು. ಪ್ರಮೀತ್ ಕೆ.ಬಿ ದ್ವಿತೀಯ ಬಿಕಾಂ ಅವರು ವಂದಿಸಿದರು. ರೇಷ್ಮಾ ಕೆ ಪ್ರಥಮ ಬಿಎ ಅವರು ಕಾರ್ಯಕ್ರಮ ನಿರೂಪಿಸಿದರು.