ಪೆರುವಾಜೆ:ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕಿನ ಇಪ್ಪತ್ತೆರಡು ಗ್ರಾಮಗಳಿಗೆ ಒಳಪಟ್ಟ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಎ.10 ಮತ್ತು 11ರಂದು ಪ್ರತಿಷ್ಠಾ ವರ್ಧಂತಿ, ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆ ಸೇರಿದಂತೆ ವಿವಿಧ
ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮಗಳ ಸಿದ್ಧತೆಗಾಗಿ ಭಕ್ತಾಧಿಗಳ ಸಭೆ ಮಾ.29ರಂದು ದೇವಾಲಯದಲ್ಲಿ ನಡೆಯಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುನಿಲ್ ಕುಮಾರ್ ರೈ ಪೆರುವಾಜೆಗುತ್ತು, ಮಾಗಣೆ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಆಮಂತ್ರಣ ಪತ್ರಿಕೆ ತಲುಪಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದರು. ಮನೆ ಮನೆಗೆ ಆಮಂತ್ರಣ ಪತ್ರಿಕೆ ವಿತರಣೆಗಾಗಿ ಭಕ್ತವೃಂದದ ಸಹಕಾರ ಅಗತ್ಯವಿದೆ ಎಂದು ಹೇಳಿದರು.
ಪ್ರತಿಷ್ಠಾ ವರ್ಧಂತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳ ಆಮಂತ್ರಣದೊಂದಿಗೆ ಪೂಜಾ ರಶೀದಿಯನ್ನು ಮನೆ ಮನೆಗೆ ತಲುಪಿಸುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು.
ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಆಮಂತ್ರಣ ಪತ್ರಿಕೆ ವಿತರಣೆಗೆ ಪ್ರತ್ಯೇಕ ತಂಡಗಳನ್ನು ರಚಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.ಕ್ಷೇತ್ರದ ಆದಾಯ ವೃದ್ಧಿಗಾಗಿ ಕಲ್ಯಾಣ ಮಂಟಪ ನಿರ್ಮಾಣದ ಯೋಜನೆ ಬಗ್ಗೆ ವಿವರಿಸಿದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುನಿಲ್ ಕುಮಾರ್ ರೈ, ವಾರ್ಷಿಕ ಆದಾಯ-ವೆಚ್ಚದ ವಿವರಗಳನ್ನು ಸಭೆಗೆ ಮಂಡಿಸಿದರು. ಎಲ್ಲರ ಸಹಕಾರದಿಂದ ಯೋಜನೆ ಕಾರ್ಯಗತಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಭೆಯಲ್ಲಿ ವ್ಯವಸ್ಥಾಪನ ಸಮಿತಿ ಸದಸ್ಯರಾದ ದೀಪಕ್ ಶೆಟ್ಟಿ, ಪಿ.ಅಜಯ್ ಶೆಟ್ಟಿ, ಶೇಷಪ್ಪ ನಾಯ್ಕ, ನಿರ್ಮಲಾ ರೈ, ಮಾಜಿ ಸದಸ್ಯರಾದ ನಾರಾಯಣ ಕೊಂಡೆಪ್ಪಾಡಿ, ಸುಜಾತ ರೈ ಪೆರುವಾಜೆ, ಪ್ರಮುಖರಾದ ಜಗದೀಶ್ ರೈ ಪೆರುವಾಜೆ, ಪ್ರೀತಂ ರೈ ಪೆರುವಾಜೆ, ಜಯಚಂದ್ರ ಪೆರುವಾಜೆ, ಪೂರ್ಣಿಮಾ ಉಮೇಶ್, ಶಿವಪ್ರಕಾಶ್ ಆಚಾರ್ಯ ಪೆರುವಾಜೆ, ಜಯಂತ ಗೌಡ ಕುಂಡಡ್ಕ, ಪೂರ್ಣಿಮಾ ಎನ್ ಕೆ., ರೂಪ ಸಾರಕರೆ, ದಿವ್ಯ, ವೇದಿತ್ ರೈ, ವಸಂತ ಪೆರುವಾಜೆ ಮೊದಲಾದವರು ಉಪಸ್ಥಿತರಿದ್ದರು










