ಬೆಳ್ಳಾರೆ: ಬೆಳ್ಳಾರೆಯ ಡಾ. ಕೆ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್. ಎಸ್. ಎಸ್ ಘಟಕ ಮತ್ತು ಸಮಾಜ ಕಾರ್ಯ ವಿಭಾಗದ ವತಿಯಿಂದ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಪ್ರಾಂಶುಪಾಲರಾದ ದಾಮೋದರ ಕಣಜಾಲು ಅವರು ಕಾಲೇಜಿನ
ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಹರಿಪ್ರಸಾದ್ ಎಸ್ ಅವರು ಪರಿಸರ ಸಂರಕ್ಷಣೆಯಲ್ಲಿ ಯುವ ಜನರ ಪಾತ್ರ ಅತ್ಯಂತ ಮಹತ್ವದ್ದು ಎಂದು ಹೇಳಿದರು.
ಎನ್. ಎಸ್. ಎಸ್. ಘಟಕದ ಕಾರ್ಯಕ್ರಮ ಆಧಿಕಾರಿ ಗಿರೀಶ್ ಸಿ ಆರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನೀಷ್ಮಾ ಸ್ವಾಗತಿಸಿ, ಅಶ್ವಿನಿ ವಂದಿಸಿ ಮತ್ತು ದೀಕ್ಷಿತ ಕಾರ್ಯಕ್ರಮ ನಿರೂಪಿಸಿದರು.