ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ 3.02 ಹಾಗೂ ಡೀಸೆಲ್ ಬೆಲೆಯಲ್ಲಿ 3 ಹೆಚ್ಚಳವಾಗಿದೆ.ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಿ ಶನಿವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಇದರೊಂದಿಗೆ, ಸುದೀರ್ಘ ಸಮಯದ
ನಂತರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿಯಾಗುತ್ತಿದೆ.
ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆಯಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಿದೆ.ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಶನಿವಾರ (ಜೂನ್ 15) ಹೊರಡಿಸಿರುವ ಸುತ್ತೋಲೆಯಲ್ಲಿ ಸರ್ಕಾರ ಉಲ್ಲೇಖಿಸಿದೆ.