ನವದೆಹಲಿ:ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 3 ಹೆಚ್ಚಿಸಲಾಗಿದೆ. ಪರಿಷ್ಕೃತ ದರ ಇಂದಿನಿಂದಲೇ (ಶುಕ್ರವಾರ) ಜಾರಿಗೆ ಬಂದಿದೆ. ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿವೆ. ರಾಷ್ಟ್ರ ರಾಜಧಾನಿಯಲ್ಲಿ
ಪೆಟ್ರೋಲ್ ಬೆಲೆ ಲೀಟರ್ಗೆ 94.77 ನಿಂದ 97.77ಕ್ಕೆ ಏರಿಕೆಯಾಗಿದೆ. ಡೀಸೆಲ್ ಬೆಲೆ 87.67 ನಿಂದ 90.67ಕ್ಕೆ ಏರಿಕೆಯಾಗಿದೆ.
ಸುಳ್ಯ ನಗರದಲ್ಲಿ ಪೆಟ್ರೋಲ್ ದರ ರೂ.106.24, ಡೀಸೆಲ್ ದರ ರೂ.94.12 ಆಗಿದೆ. ದರ ಏರಿಕೆಗಿಂತ ಮುನ್ನ ಪೆಟ್ರೋಲ್ ದರ 102.98 ಹಾಗು ಡೀಸೆಲ್ ದರ 91.01 ಇತ್ತು.
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಕಳೆದ 4 ವರ್ಷಗಳಿಂದ (2022ರ ಏಪ್ರಿಲ್) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರಲಿಲ್ಲ. ಆದರೆ ಲೋಕಸಭಾ ಚುನಾವಣೆಗೆ ಸ್ವಲ್ಪ ಮೊದಲು ಅಂದರೆ 2024ರ ಮಾರ್ಚ್ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 2 ಕಡಿತಗೊಳಿಸಲಾಗಿತ್ತು.














