ನವದೆಹಲಿ: ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಸೋಮವಾರ 2 ರೂ. ಹೆಚ್ಚಿಸಿದೆ.
ಏಪ್ರಿಲ್ 8ರಿಂದ ಇದು ಅನ್ವಯವಾಗಲಿದೆ.ಹೊಸ ಸುಂಕ ಹೇರಿಕೆ ಚಿಲ್ಲರೆ ಮಾರಾಟದ ದರದ ಮೇಲೆ ಯಾವುದೇ ಪರಿಣಾಮ ಬೀರದು ಎಂದು
ಕೇಂದ್ರ ಸರಕಾರ ಹೇಳಿದೆ.ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ದರ ಇಳಿಕೆ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ.ಈ ಬಗ್ಗೆ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯ ಆದೇಶ ಹೊರಡಿಸಿದ್ದು, ಈ ಹೊಸ ಸುಂಕ ಹೇರಿಕೆ ಚಿಲ್ಲರೆ ಮಾರಾಟದ ದರದ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಹೇಳಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಇಳಿಕೆಯಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಯುವ ನಿರೀಕ್ಷ ಇತ್ತು.