ಬೆಂಗಳೂರು: ‘ಕರ್ನಾಟಕವು ತೈಲೋತ್ಪನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ
ಶನಿವಾರ(ಜೂನ್ 15) ಆದೇಶ ಹೊರಡಿಸಿದ್ದು, ಇದರಿಂದಾಗಿ ಪೆಟ್ರೋಲ್ ದರ ಪ್ರತಿ ಲೀಟರ್ಗೆ 3.02ರಷ್ಟು ಹಾಗೂ ಡೀಸೆಲ್ ದರ ಲೀಟರ್ಗೆ 3ರಷ್ಟು ಹೆಚ್ಚಾಗಿದೆ. ದರ ಏರಿಕೆ ಮಾಡಿ ಆದೇಶ ಹೊರಡಿಸಿದ್ದರ ವಿರುದ್ಧ ವಿರೋಧ ಪಕ್ಷಗಳಿಂದ ಟೀಕೆ ವ್ಯಕ್ತವಾಗಿದ್ದು, ಪ್ರತಿಭಟನೆಗೂ ಕರೆ ನೀಡಿವೆ.
ಆಗಾಗ್ಗೆ ಕೇಂದ್ರ ಸರ್ಕಾರವು ತೆರಿಗೆ ಕಡಿತಗೊಳಿಸಿದ ಹೊರತಾಗಿಯೂ ಈಗಿನ ಅಬಕಾರಿ ಸುಂಕವು ಪೆಟ್ರೋಲ್ ಮೇಲೆ 19.9 ಹಾಗೂ ಡೀಸೆಲ್ ಮೇಲೆ 15.8 ಇದೆ. ಕೇಂದ್ರ ಸರ್ಕಾರ ಜನಹಿತದ ದೃಷ್ಟಿಯಿಂದ ಈ ತೆರಿಗೆಯನ್ನು ಇಳಿಕೆ ಮಾಡಬೇಕು’ ಎಂದು ಮುಖ್ಯಮಂತ್ರಿಯವರು ಒತ್ತಾಯಿಸಿದರು.
ರಾಜ್ಯ ಸರ್ಕಾರದ ಮೌಲ್ಯವರ್ಧಿತ ತೆರಿಗೆಯಲ್ಲಾದ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಸಲ್ಪಡುತ್ತದೆ ಎಂಬ ಗ್ಯಾರಂಟಿಯನ್ನು ನಾನು ನೀಡುತ್ತೇನೆ’ ಎಂದು ಅವರು ಹೇಳಿದರು.