ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅಜಿತ್ ಪವಾರ್ ಸೇರಿದಂತೆ ಪಿಎಸ್ಒ ಜಾಧವ್, ಓರ್ವ ಸಹಾಯಕ, ಇಬ್ಬರು ಪೈಲೈಟ್ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು
ವರದಿಯಾಗಿದೆ.ಮಹಾರಾಷ್ಟ್ರದಲ್ಲಿ ನಿಗದಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಜಿತ್ ಅವರು ಮುಂಬೈಯಿಂದ ಬಾರಾಮತಿಗೆ ಹೊರಟಿದ್ದರು ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ

ಪ್ರಗತಿಯಲ್ಲಿದೆ.ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷರೂ ಆಗಿರುವ ಅಜಿತ್ ಹಾಗೂ ಅವರ ಸಿಬ್ಬಂದಿ ಇದ್ದ ವಿಮಾನ ಮುಂಬೈನಿಂದ ಬೆಳಿಗ್ಗೆ 8ರ ಸುಮಾರಿಗೆ ಪ್ರಯಾಣ ಆರಂಭಿಸಿತ್ತು. ಅದಾದ ಒಂದು ಗಂಟೆಯಲ್ಲೇ ದುರ್ಘಟನೆ ಸಂಭವಿಸಿದೆ.ಮಹಾರಾಷ್ಟ್ರದಲ್ಲಿ ನಿಗದಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಜಿತ್ ಅವರು ಬಾರಾಮತಿಗೆ ಹೊರಟಿದ್ದರು. ನಾಲ್ಕು ಕಡೆ ಸಾರ್ವಜನಿಕ ಸಮಾವೇಶ ನಿಗದಿಯಾಗಿತ್ತು ಎಂದು ಮೂಲಗಳು ತಿಳಿಸಿವೆ.






