ಮಂಗಳೂರು: ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ,ಉಳ್ಳಾಲ ತಾಲೂಕು ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ , ಹರೇಕಳ ಗ್ರಾಮ ಪಂಚಾಯತ್ ಮತ್ತು ಜನಶಿಕ್ಷಣ ಟ್ರಸ್ಟ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ಲಾಸ್ಟಿಕ್ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ 210.52 ಕೆ.ಜಿ.ಪ್ಲಾಸ್ಟಿಕ್ ಸಂಗ್ರಹ ವಾಗಿದೆ.ಈ ಸಂದರ್ಭದಲ್ಲಿ ಪ್ಲಾಸ್ಟಿಕ್ ತಂದವರಿಗೆ 1200 ಕೆ.ಜಿ ಅಕ್ಕಿ ವಿತರಿಸಲಾಯಿತು.
ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನದ ಅಂಗವಾಗಿ
ಸಾರ್ವಜನಿಕರು ತರುವ 100 ಗ್ರಾಂ ನಿಂದ 500 ಗ್ರಾಂ ವರೆಗಿನ ಪ್ಲಾಸ್ಟಿಕ್ ಗೆ 1 ಕೆಜಿ ಆಕ್ಕಿ ಹಾಗೂ 500 ಗ್ರಾಂ ಮೇಲ್ಪಟ್ಟು ಪ್ಲಾಸ್ಟಿಕ್ ತಂದ ಸಾರ್ವಜನಿಕರಿಗೆ 5 ಕೆಜಿ ಅಕ್ಕಿಯನ್ನು ಹಾಗೂ 1 ಕೆಜಿ ಮೇಲ್ಪಟ್ಟು ಪ್ಲಾಸ್ಟಿಕ್ ತಂದವರಿಗೆ 10 ಕೆಜಿ ಅಕ್ಕಿಯನ್ನು ವಿತರಿಸಲಾಗುವುದು ಎಂದು ತಿಳಿಸಲಾಗಿತ್ತು.
ಉಳ್ಳಾಲ ತಾಲೂಕು ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೈಲಾ ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.ದ.ಕ ಜಿಲ್ಲಾ ಸ್ವಚ್ಛತಾ ರಾಯಭಾರಿ ಮತ್ತು ಜನ ಶಿಕ್ಷಣ ಟ್ರಸ್ಟ್ ನಿರ್ದೇಶಕರಾದ ಶೀನ ಶೆಟ್ಟಿ,ಮುಡಿಪು ಜನ ಶಿಕ್ಷಣ ಟ್ರಸ್ಟ್ ನಿರ್ದೇಶಕರಾದ
ಕೃಷ್ಣ ಮೂಲ್ಯ ಮುಖ್ಯ ಅತಿಥಿಗಳಾಗಿ ಭಾಗ ವಹಿಸಿದ್ದರು.
ಹರೇಕಳ ಗ್ರಾಮ ಪಂಚಾಯತ್ ಆಧ್ಯಕ್ಷೆ ಗುಲಾಬಿ, ಉಪಾಧ್ಯಕ್ಷ ಅಬ್ದುಲ್ ಮಜೀದ್ , ನಿಕಟ ಪೂರ್ವ ಅಧ್ಯಕ್ಷ ಬದ್ರುದ್ದೀನ್,ಮಾಜಿ ಅಧ್ಯಕ್ಷೆ ಅನಿತಾ, ದೇರಳಕಟ್ಟೆಯ ಶಿವಾಸ್ ಕಾಲೇಜಿನ ಪ್ರಾಂಶುಪಾಲೆ ರುವಿನಾ ಸೋನ್ಸ್ , ಉಳ್ಳಾಲ ತಾಲೂಕು ಪತ್ರಕರ್ತರ ಸಂಘದ ಆಧ್ಯಕ್ಷ ವಸಂತ ಎನ್. ಕೊಣಾಜೆ, ಮುಖ್ಯ ಅತಿಥಿಗಳಾಗಿ ಭಾಗ ವಹಿಸಿದ್ದರಉ. ಹರೇಕಳ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುತ್ತಪ್ಪ ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈಕಟ್ಟ,ಅನ್ಸಾರ್ ಇನೋಳಿ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜೇಶ್ ದಡ್ಡಂಗಡಿ,ಉಳ್ಳಾಲ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಧರ ಪೊಯ್ಯತ್ತಬೈಲ್, ಉಪಾಧ್ಯಕ್ಷ ಆರಿಫ್ ಕಲ್ಕಟ್ಟ, ಕಾರ್ಯದರ್ಶಿ ಸತೀಶ್ ಕೊಣಾಜೆ, ಕೊಶಾಧಿಕಾರಿ ಬಶೀರ್ ಕಲ್ಕಟ್ಟ ಮೊದಲಾದವರು ಉಪಸ್ಥಿತರಿದ್ದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.









