ಸುಳ್ಯ: ಸುಳ್ಯ ನಗರದ ಅಂಗಡಿ ಮುಂಗಟ್ಟುಗಳಿಗೆ ಅನಧಿಕೃತ ವಾಗಿ ನಿಷೇಧಿತ ಪ್ಲಾಸ್ಟಿಕ್ ಸರಬರಾಜು ಮಾಡುತ್ತಿದ್ದ ವಾಹನವನ್ನು ಪ್ಲಾಸ್ಟಿಕ್ ಸಮೇತ ನಗರ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು ಸೇರಿ ವಶಕ್ಕೆ ಪಡೆದುಕೊಂಡಿದ್ದಾರೆ. ಸುಳ್ಯ ನಗರದ ವಿವಿಧ ಅಂಗಡಿ ಮುಂಗಟ್ಟುಗಳಿಗೆ ಮಂಗಳೂರಿನಿಂದ ತಂದು ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದರು. ಇದರ ಬಗ್ಗೆ ಮಾಹಿತಿ ಪಡೆದು ನಗರ ಪಂಚಾಯತ್ ಸದಸ್ಯರು, ಅಧಿಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಓಮ್ನಿ ಕಾರಿನಲ್ಲಿ ತರಲಾಗಿದ್ದ ಪ್ಲಾಸ್ಟಿಕ್ ಹಾಗೂ ವಾಹನ ವಶಪಡಿಸಿಕೊಂಡಿದ್ದಾರೆ ತಿಳಿದು ಬಂದಿದೆ. ನಿರ್ದಿಷ್ಟ ಎಂಎಂ ಗಿಂತ ಕಡಿಮೆ ಪ್ರಮಾಣದ ಪ್ಲಾಸ್ಟಿಕ್ ಬಳಕೆಯನ್ನು ನಗರದಲ್ಲಿ ನಿಷೇಧಿಸಲಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.