ನವದೆಹಲಿ:ಇಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ದೇಶಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 17ರಂದು 74ನೇ ವರ್ಷಕ್ಕೆ ಕಾಲಿಡಲಿದ್ದಾರೆ.
ಮೋದಿಯವರ ಜನ್ಮದಿನದ ಪ್ರಯುಕ್ತ ಮಂಗಳವಾರ ಬಿಜೆಪಿ ವತಿಯಿಂದ ದೇಶಾದ್ಯಂತ
ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ‘ಸೇವಾ ಪರ್ವ’ವನ್ನು ಆಚರಿಸಲಾಗುವುದು. ಈ ಮೂಲಕ 15 ದಿನಗಳ ಅವಧಿಯ ಹಬ್ಬವನ್ನು ಬಿಜೆಪಿ ಪ್ರತಿ ವರ್ಷ ಆಯೋಜಿಸುತ್ತದೆ.
ಗುಜರಾತ್ನ ಮೆಹ್ಸಾನಾ ಪಟ್ಟಣದಲ್ಲಿ 1950ರ ಸೆಪ್ಟೆಂಬರ್ 17ರಂದು ನರೇಂದ್ರ ದಾಮೋದರದಾಸ್ ಮೋದಿಯಾಗಿ ಜನಿಸಿದ ಅವರು ಸತತ 3 ಅವಧಿಗೆ ಗುಜರಾತ್ ರಾಜ್ಯದ ಸಿಎಂ ಆಗಿ ಸೇವೆ ಸಲ್ಲಿಸಿದ್ದರು. ಈಗ ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ಬಿಜೆಪಿ ವತಿಯಿಂದ ದೇಶಾದ್ಯಂತ ರಕ್ತದಾನ ಶಿಬಿರಗಳು ಮತ್ತು ಸ್ವಚ್ಛತಾ ಅಭಿಯಾನಗಳನ್ನು ಆಯೋಜಿಸಲಾಗುತ್ತದೆ. ಪಕ್ಷದ ಕಾರ್ಯಕರ್ತರು ಮತ್ತು ಸ್ವಯಂಸೇವಕರು ಆಸ್ಪತ್ರೆಗಳು, ಶಾಲೆಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ಕೈಗೊಳ್ಳುತ್ತಾರೆ.
ಸುಳ್ಯದಲ್ಲಿಯೂ ವಿವಿಧ ಕಾರ್ಯಕ್ರಮ ನಡೆಯಲಿದೆ.
ಸುಳ್ಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಸಂಜೆ 4 ಕ್ಕೆ ಅಡ್ಕಾರ್ನ
ವನವಾಸಿ ಕಲ್ಯಾಣಾಶ್ರಮ ವನಸುಮದಲ್ಲಿ ಮಕ್ಕಳ ಜೊತೆಗೆ ನರೇಂದ್ರ ಮೋದಿ ಜನ್ಮ ದಿನಾಚರಣೆಯ ಕಾರ್ಯಕ್ರಮ ಆಯೋಜಿಸಲಾಗಿದೆ.
ಶಾಸಕರ _ಮಂಡಲಾಧ್ಯಕ್ಷರ-ಮಂಡಲ ಸಮಿತಿ ಸದಸ್ಯರು ಭಾಗವಹಿಸಲಿದ್ದಾರೆ. ಅಲ್ಲದೇ ಅಲ್ಲಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.