ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು 73ನೇ ವರ್ಷದ ಜನ್ಮ ದಿನದ ಸಂಭ್ರಮ. ನಾಡಿನೆಲ್ಲೆಡೆಯಿಂದ ಪ್ರಧಾನಿಗೆ ರಾಜಕೀಯ, ಸಾಮಾಜಿಕ ಕ್ಷೇತ್ರದ ಮುಖಂಡರು ಅಭಿಮಾನಿಗಳು ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲಾತಾಣಗಳಲ್ಲಿ ಅಭಿಮಾನಿಗಳು ಪ್ರಧಾನಿ
ಅವರಿಗೆ ಶುಭಾಶಯ ಕೋರಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿ ರಾಷ್ಟ್ರೀಯ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ದೇವರು ಆರೋಗ್ಯ, ದೀರ್ಘಾಯುಷ್ಯ ಆಶೀರ್ವದಿಸಲಿ ಎಂದು ಮಲ್ಲಿಕಾರ್ಜುನ ಖರ್ಗೆ ಶುಭಾಶಯ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.