ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಹಾಗೂ ರಾಜ್ಯಗಳ ಸಿದ್ಧತಾ ಯೋಜನೆಗಳ ಕುರಿತು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ
ಶುಕ್ರವಾರ ವರ್ಚುವಲ್ ಆಗಿ ಸಭೆ ನಡೆಸಿದರು.ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಕುರಿತು ಈ ವಾರದ ಆರಂಭದಲ್ಲಿ ಸರ್ಕಾರವು ಸರ್ವಪಕ್ಷ ಸಭೆಯನ್ನು ಕರೆದಿತ್ತು. ಅಲ್ಲದೆ, ಪ್ರಧಾನಿ ಮೋದಿಯವರು ಸಂಸತ್ತಿನ ಉಭಯ ಸದನಗಳಲ್ಲಿ ಬಿಕ್ಕಟ್ಟಿನ ಕುರಿತು ಅಧಿಕೃತ ಹೇಳಿಕೆ ನೀಡಿದ್ದರು.ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ಫೆ.28 ರಂದು ಆರಂಭವಾದ ಈ ಸಂಘರ್ಷವು ಜಾಗತಿಕ ಇಂಧನ ಪೂರೈಕೆಯ ಮೇಲೆ ಪರಿಣಾಮ ಬೀರಿದೆ.ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಪುದುಚೇರಿಯಲ್ಲಿ ಚುನಾವಣೆ ಮಾದರಿ ಸಂಹಿತೆ ಜಾರಿಯಲ್ಲಿರುವ ಕಾರಣ ಆ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿಲ್ಲ.













