ನವದೆಹಲಿ:ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧ ಸಿಜೆಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕರ ಪ್ರತಿಭಟನೆ ತೀವ್ರಗೊಂಡಿರುವಾಗಲೇ ಗುರುವಾರ ರಾತ್ರಿ ಸುಮಾರು
3 ನಿಮಿಷಗಳ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ನರೇಂದ್ರ ಮೋದಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಶುಕ್ರವಾರ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ತರ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.ಯುವಕರ ಭವಿಷ್ಯಕ್ಕಿಂತ ನಮಗೆ ಬೇರೇನೂ ಮುಖ್ಯವಲ್ಲ, ಪ್ರಶ್ನೆಪತ್ರಿಕೆ ಸೋರಿಕೆ ಮಾಡುವವರಿಗೆ ತ್ವರಿತವಾಗಿ ಹಾಗೂ ಕಠಿಣ ಶಿಕ್ಷೆ ವಿಧಿಸಲು ಶೀಘ್ರಗತಿ ನ್ಯಾಯಾಲಯ ಸ್ಥಾಪನೆಗೆ ನಿರ್ಧರಿಸಿದ್ದೇವೆ, ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಅತ್ಯಂತ ಕಠಿಣ ಕ್ರಮವನ್ನು ಶುಕ್ರವಾರ ಕೇಂದ್ರ ಸಚಿವ ಸಂಪುಟ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.








