ಸುಳ್ಯ: ಸುಳ್ಯ ಪೊಲೀಸ್ ವೃತ್ತ ವ್ಯಾಪ್ತಿಯ ಬೆಳ್ಳಾರೆ, ಸುಬ್ರಮಣ್ಯ, ಸುಳ್ಯ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಗಳಿಗೆ ದೊಂಬಿ ನಿಗ್ರಹ ಕವಾಯತು ತರಬೇತಿ ನೀಡಲಾಯಿತು.ಈ ಮೂಲಕ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ತುರ್ತು ಸಂದರ್ಭಗಳಲ್ಲಿ ಯಾವ ರೀತಿ ಸ್ಪಂದಿಸಬೇಕು, ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾದಾಗ ಯಾವ ರೀತಿ ರಕ್ಷಣಾತ್ಮಕ ವಾಗಿ ಪ್ರತಿಕ್ರಿಯಿಸಿ ಎದುರಿಸಬೇಕು ಎಂಬುದರ ಬಗ್ಗೆ ಪ್ರಾಯೋಗಿಕವಾಗಿ


ತಿಳಿಸಲಾಯಿತು. ಇಂತಹ ತರಬೇತಿಗಳಿಂದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ವೃತ್ತಿ ಕೌಶಲ್ಯ, ಜ್ಞಾನ,ಮಾನಸಿಕ ಸ್ಥೈರ್ಯ, ಆತ್ಮ ವಿಶ್ವಾಸ ಗಳನ್ನು ಹೆಚ್ಚಿಸಿಕೊಂಡು ವೃತ್ತಿಪರತೆ ಯಿಂದ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ಇನ್ನು ಮುಂದೆ ಜಿಲ್ಲೆಯ ಎಲ್ಲ ಪೊಲೀಸ್ ವೃತ್ತ ಹಾಗೂ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇಂತಹ ತರಬೇತಿ ಗಳನ್ನು ನೀಡಲಾಗುವುದು ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ. ಸುಳ್ಯದಲ್ಲಿ ನಡೆದ ಶಿಬಿರದಲ್ಲಿ
ಮಂಗಳೂರು ವಿಭಾಗದ ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಕೆ ಎಸ್ ತರಬೇತಿಯನ್ನು ನೀಡಿ ಪೊಲೀಸರ ಸ್ವಯಂ ರಕ್ಷಣಾ ವ್ಯಾಯಮಗಳನ್ನು ಮತ್ತು ಅನುಸರಿಸಬೇಕಾದ ರಕ್ಷಣಾ ಕವಚಗಳ ಬಳಕೆಗಳ ಮಾಹಿತಿ ನೀಡಿದರು.
ಸುಳ್ಯ ವೃತ್ತ ನಿರೀಕ್ಷಕ ರವೀಂದ್ರ, ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್, ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ ಸುಹಾಸ್, ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.